ರಾಯ್ಪುರ: ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ಅವರಿಗೆ ನ್ಯಾಯಾಲಯದಿಂದ ಬಿಗ್ ಶಾಕ್ ಎದುರಾಗಿದೆ. 2017ರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಘೇಲ್ ಅವರನ್ನು ಖುಲಾಸೆಗೊಳಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ರಾಯ್ಪುರದ ಸಿಬಿಐ ವಿಶೇಷ ನ್ಯಾಯಾಲಯವು ಶನಿವಾರ ರದ್ದುಗೊಳಿಸಿದೆ. ಇದರಿಂದಾಗಿ ಮಾಜಿ ಸಿಎಂ ಬಘೇಲ್ ಮತ್ತೆ ಕಾನೂನು ಸಂಕಷ್ಟಕ್ಕೆ ಸಿಲುಕುವಂತಾಗಿದೆ.
2017ರಲ್ಲಿ ಅಂದಿನ ಸಚಿವ ರಾಜೇಶ್ ಮುನಾತ್ ಅವರ ಮಾನಹಾನಿ ಆರೋಪದಡಿ ಬಘೇಲ್ ಅವರನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ 2024ರಲ್ಲಿ ಖುಲಾಸೆಗೊಳಿಸಿತ್ತು. ಆದರೆ, ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ, 2026ರ ಜನವರಿ 24 ರಂದು ಖುಲಾಸೆಯನ್ನು ರದ್ದು ಮಾಡಿದೆ. ಅಷ್ಟೇ ಅಲ್ಲದೆ, ವಿನೋದ್ ವರ್ಮಾ ಸೇರಿದಂತೆ ಪ್ರಕರಣದ ಇತರ ಆರೋಪಿಗಳ ಮೇಲ್ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಏನಿದು ಸೆಕ್ಸ್ ಸಿಡಿ ಹಗರಣ?
ಛತ್ತೀಸ್‌ಗಢದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಲೋಕೋಪಯೋಗಿ ಸಚಿವರಾಗಿದ್ದ ರಾಜೇಶ್ ಮುನಾತ್ ಅವರ ಹೆಸರಿಗೆ ಕಳಂಕ ತರಲು ನಕಲಿ ಸೆಕ್ಸ್ ಸಿಡಿ ಸೃಷ್ಟಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣ ಸಂಬಂಧ 2016ರ ಅಕ್ಟೋಬರ್‌ನಲ್ಲಿ 2016ರ ಅಕ್ಟೋಬರ್‌ನಲ್ಲಿ ಪತ್ರಕರ್ತ ಹಾಗೂ ಬಘೇಲ್ ಆಪ್ತ ವಿನೋದ್ ಶರ್ಮಾ ಎಂಬುವವರ ಬಳಿ ಸುಮಾರು 500 ಸಿಡಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಆಗಿನ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಬಘೇಲ್ ಅವರು ಈ ವಿಡಿಯೋವನ್ನು ರಾಜಕೀಯವಾಗಿ ಹರಡಿದ್ದಾರೆ ಎಂಬ ದೂರಿನ ಮೇರೆಗೆ 14 ದಿನಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು. ನಂತರ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.
ಸಿಬಿಐ ತನ್ನ ದೋಷಾರೋಪ ಪಟ್ಟಿಯಲ್ಲಿ ಬಘೇಲ್ ಸೇರಿದಂತೆ ಆರು ಜನರ ಹೆಸರನ್ನು ಉಲ್ಲೇಖಿಸಿತ್ತು. 2024ರಲ್ಲಿ ಕೆಳ ನ್ಯಾಯಾಲಯ ನೀಡಿದ್ದ ರಿಲೀಫ್ ಈಗ ಸಿಬಿಐ ವಿಶೇಷ ನ್ಯಾಯಾಲಯದ ಆದೇಶದಿಂದ ಮಾಯವಾಗಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಮತ್ತು ಭೂಪೇಶ್ ಬಘೇಲ್ ಅವರಿಗೆ ರಾಜಕೀಯವಾಗಿ ದೊಡ್ಡ ಹಿನ್ನಡೆ ಎಂದು ವಿಶ್ಲೇಷಿಸಲಾಗುತ್ತಿದೆ.


