Top Newsದೇಶ/ವಿದೇಶ

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ: ಐವರ ದುರ್ಮರಣ

ಮುಂಬೈ: ಮಹಾರಾಷ್ಟ್ರ ರಾಜಕಾರಣದ ದಿಗ್ಗಜ, ಎನ್‌ಸಿಪಿ (NCP) ಮುಖ್ಯಸ್ಥ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂಬೈನಿಂದ ತಮ್ಮ ಸ್ವಕ್ಷೇತ್ರ ಬಾರಾಮತಿಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಘಟನೆಯ ವಿವರ:

ಇಂದು ಬೆಳಿಗ್ಗೆ ಮುಂಬೈ ನಿಲ್ದಾಣದಿಂದ ಟೇಕಾಫ್​​ ಆದ ಕೆಲವೇ ಸಮಯದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ವಿಮಾನವು ಪತನಗೊಂಡಿದೆ ಎನ್ನಲಾಗಿದೆ. ವಿಮಾನದಲ್ಲಿದ್ದ ಅಜಿತ್ ಪವಾರ್ ಸೇರಿದಂತೆ ಒಟ್ಟು ಐವರು ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೃತರ ಪೈಕಿ ಇಬ್ಬರು ಪೈಲಟ್‌ಗಳು ಹಾಗೂ ಇಬ್ಬರು ಭದ್ರತಾ ಸಿಬ್ಬಂದಿ ಸೇರಿದ್ದಾರೆ ಎಂದು ಪ್ರಾಥಮಿಕ ವರದಿಗಳು ಖಚಿತಪಡಿಸಿವೆ.

ಸ್ಥಳಕ್ಕೆ ಧಾವಿಸಿದ ರಕ್ಷಣಾ ಪಡೆ:

ಘಟನಾ ಸ್ಥಳಕ್ಕೆ ರಕ್ಷಣಾ ಪಡೆಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ದುರಂತದ ತೀವ್ರತೆಗೆ ವಿಮಾನವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬೆಂಕಿ ಕಾಣಿಸಿಕೊಂಡಿತ್ತು ಎನ್ನಲಾಗಿದೆ.

ಗಣ್ಯರ ಸಂತಾಪ:

ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ರಾಷ್ಟ್ರದ ಗಣ್ಯರು, ರಾಜಕೀಯ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಮಹಾರಾಷ್ಟ್ರ ರಾಜಕಾರಣದಲ್ಲಿ ‘ದಾದಾ’ ಎಂದೇ ಖ್ಯಾತರಾಗಿದ್ದ ಪವಾರ್ ಅವರ ಅಗಲಿಕೆ ರಾಜ್ಯಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗೆ ಆದೇಶಿಸಲಾಗಿದೆ.

Comments (0)

Your email address will not be published. Required fields are marked *

Back to top button