ಜಿಲ್ಲೆವಾಣಿಜ್ಯ

ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಸಿ. ಶಿಖಾ ಮತ್ತು ದಿವ್ಯಾಪ್ರಭು ಆಯ್ಕೆ

ಬೆಂಗಳೂರು: ಮತದಾರರ ದಿನಾಚರಣೆ ಅಂಗವಾಗಿ ಕೇಂದ್ರ ಚುನಾವಣಾ ಆಯೋಗವು ರಾಷ್ಟ್ರ ಮಟ್ಟದ ವಿಶೇಷ ಪ್ರಶಸ್ತಿಗಳಿಗೆ ರಾಜ್ಯ ವಾಜಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾ ಮತ್ತು ಚಿತ್ರದುರ್ಗದ ಜಿಲ್ಲಾಧಿಕಾರಿ ದಿವ್ಯಾಪ್ರಭು ಆಯ್ಕೆಯಾಗಿದ್ದಾರೆ.

ಕೇಂದ್ರ ಚುನಾವಣಾ ಆಯೋಗ ಅತ್ಯುತ್ತಮ ಚುನಾವಣಾ ಕಾರ್ಯಗಳನ್ನು ಪ್ರೋತ್ಸಹಿಸಲು ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗೆ ರಾಜ್ಯದ ಇಬ್ಬರು ಅಧಿಕಾರಿಗಳು ಭಾಜನರಾಗಿದ್ದಾರೆ. 2023 ನೇ ಸಾಲಿನ ರಾಷ್ಟ್ರಮಟ್ಟದ ಪ್ರಶಸ್ತಿಗಳಿಗೆ ಸಾಮಾನ್ಯ ಪ್ರಶಸ್ತಿ ವರ್ಗದಡಿಯಲ್ಲಿ ಚಿತ್ರದುರ್ಗದ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಹಾಗೂ ಅತ್ಯತ್ತಮವಾಗಿ ಕಾರ್ಯನಿರ್ವಹಿಸಿದ ಇಲಾಖೆಗೆ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತೆ ಸಿ.ಶಿಖಾ ಅವರು ಪಾತ್ರರಾಗಿದ್ದಾರೆ.ದೆಹಲಿಯಲ್ಲಿ ಜ.25ರಂದು ಹಮ್ಮಿಕೊಳ್ಳುವ ರಾಷ್ಟ್ರೀಯ ಮಯದಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

Comments (0)

Your email address will not be published. Required fields are marked *

Back to top button