Top Newsಜಿಲ್ಲೆರಾಜ್ಯವೈರಲ್ ನ್ಯೂಸ್ಸುದ್ದಿ

ಚಂದಾಪುರದಲ್ಲಿ 20 ಅಡಿ ಕುಸಿದ ಹೆದ್ದಾರಿ;ಕಿ.ಮೀ ಟ್ರಾಫಿಕ್ ಜಾಮ್

ಬೆಂಗಳೂರು: ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಹಳೇ ಚಂದಾಪುರದ ಬಳಿ ಸಂಭವಿಸಿದ ಭಾರೀ ರಸ್ತೆ ಕುಸಿತವು ವಾಹನ ಸವಾರರ ಪಾಲಿಗೆ ನರಕ ಪ್ರದರ್ಶನ ಮಾಡಿಸಿದೆ . ಅಂಡರ್ ಪಾಸ್ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲೇ ಸುಮಾರು 20 ಅಡಿ ಆಳಕ್ಕೆ ರಸ್ತೆ ಕುಸಿದಿದ್ದು, ಚಂದಾಪುರದಿಂದ ಅತ್ತಿಬೆಲೆಯವರೆಗೆ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಮುಂಜಾನೆ 5 ಗಂಟೆಯಿಂದಲೇ ಆರಂಭವಾದ ಈ ಸಂಚಾರ ದಟ್ಟಣೆಯಿಂದಾಗಿ ಶಾಲಾ ಬಸ್ಸುಗಳು, ಐಟಿ ಉದ್ಯೋಗಿಗಳು ಮತ್ತು ತುರ್ತು ಚಿಕಿತ್ಸೆಗಾಗಿ ತೆರಳುತ್ತಿದ್ದ ಆಂಬುಲೆನ್ಸ್‌ಗಳು ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕುವಂತಾಯಿತು.

ಈ ದುರಂತಕ್ಕೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸಮೀಪದ ಲೇಔಟ್‌ಗಳ ಸ್ಯಾನಿಟರಿ ನೀರು ನುಗ್ಗಿ ಮಣ್ಣು ಸಡಿಲಗೊಂಡಿರುವುದು ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಕಳೆದ ಆರು ತಿಂಗಳಿಂದ ನಡೆಯುತ್ತಿರುವ ಆಮೆಗತಿ ಕಾಮಗಾರಿಯ ಜೊತೆಗೆ, ವಿದ್ಯುತ್ ಕಂಬಗಳ ಸ್ಥಳಾಂತರಕ್ಕೆ ಬೆಸ್ಕಾಂ ಅಧಿಕಾರಿಗಳ ಅಸಹಕಾರವೂ ವಿಳಂಬಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೆದ್ದಾರಿ ಪ್ರಾಧಿಕಾರದ ಈ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ

Comments (0)

Your email address will not be published. Required fields are marked *

Back to top button