Top Newsಜಿಲ್ಲೆರಾಜ್ಯಸುದ್ದಿ

ಬೆಂಗಳೂರಿನ ರಾಯಭಾರಿ ಕಚೇರಿ ಉಡಾಯಿಸುವ ಬೆದರಿಕೆ ಹಾಕಿದವರು ಯಾರು?

ಬೆಂಗಳೂರು: ಹಲಸೂರು ಭಾಗದಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದಿದ್ದು, ನಗರದಲ್ಲಿ ಮತ್ತೊಮ್ಮೆ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಜನವರಿ 30ರಂದು ಈ ಬೆದರಿಕೆ ಸಂದೇಶ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕಿಡಿಗೇಡಿಗಳು ಕಳುಹಿಸಿರುವ ಇ-ಮೇಲ್‌ನಲ್ಲಿ ಕಚೇರಿ ಆವರಣದಲ್ಲಿ 5 ಆರ್‌ಡಿಎಕ್ಸ್ ಬಾಂಬ್‌ಗಳನ್ನು ಇರಿಸಲಾಗಿದ್ದು, ಅವುಗಳನ್ನು ಸ್ಫೋಟಿಸುತ್ತೇವೆ ಎಂಬ ಆತಂಕಕಾರಿ ಎಚ್ಚರಿಕೆ ನೀಡಲಾಗಿತ್ತು. ಇಟಾಲಿಯನ್ ಕಾನ್ಸುಲೇಟ್‌ನ ಸೆಕ್ಯೂರಿಟಿ ಮ್ಯಾನೇಜರ್ ಆದ ಜಿಯೋಡೊಮೆನಿಕ್ ಒ ಮಿಲಾನೋ ಅವರು ಈ ಬಗ್ಗೆ ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಬಾಂಬ್ ಪತ್ತೆ ದಳ (BDDS) ಮತ್ತು ಶ್ವಾನ ದಳ ಇಡೀ ಆವರಣವನ್ನು ಕೂಲಂಕಷವಾಗಿ ತಪಾಸಣೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಇದು ಕೇವಲ ಹುಸಿ ಬೆದರಿಕೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇ-ಮೇಲ್ ಕಳುಹಿಸಿದ ಕಿಡಿಗೇಡಿಗಳ ಪತ್ತೆಗಾಗಿ ತನಿಖೆ ಚುರುಕುಗೊಂಡಿದೆ.

Comments (0)

Your email address will not be published. Required fields are marked *

Back to top button