ಜನಸಾಮಾನ್ಯರ ದನಿ
165 ದಿನಗಳಲ್ಲಿ ಶತಕೋಟಿ ದಾಟಿದ ಮಹಿಳೆಯರ ಉಚಿತ ಪ್ರಯಾಣ, ವ್ಯಯವಾಗಿದ್ದು ಎಷ್ಟು ಕೋಟಿ ಗೊತ್ತಾ?

ನಾಲ್ಕೂ ನಿಗಮಗಳ ಬಸ್ಗಳಲ್ಲಿ ಇಲ್ಲಿವರೆಗೆ ನೂರು ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಲಾಭ ಪಡೆದಿದ್ದಾರೆ. ಜೂನ್ 11 ರಿಂದ ನವೆಂಬರ್ 22 ರವರೆಗೂ 100.47 ಕೋಟಿ ಮಹಿಳಾ ಪ್ರಯಾಣಿಕರು ಸಂಚಾರ ಮಾಡಿದ್ದಾರೆ. ಶಕ್ತಿ ಯೋಜನೆ ಜಾರಿಯಾಗಿ ಐದೇ ತಿಂಗಳಿಗೆ 2397 ಕೋಟಿ ವ್ಯಯವಾಗಿದೆ. ಇನ್ನು ಕೆಲವೇ ದಿನಗಳಲ್ಲಿ 2500 ಕೋಟಿ ತಲುಪಲಿದೆ.





