ರಾಜ್ಯಸುದ್ದಿ

ಫೆಬ್ರವರಿ 12ರಿಂದ ವಿಧಾನಮಂಡಲ ಅಧಿವೇಶನ ; ಫೆಬ್ರವರಿ 16ಕ್ಕೆ ರಾಜ್ಯ ಬಜೆಟ್​ ಮಂಡನೆ

ಬೆಂಗಳೂರು : ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧೀವೇಶನ ನಡೆಸಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದು ಪ್ರೀಢಂ ಟಿವಿಯ ಎಕ್ಸ್​ಕ್ಲೂಸಿವ್​ ಸುದ್ದಿ.

ಇಂದು ವಿದಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ಅಧಿವೇಶನ ನಡೆಸಲು ಮತ್ತು ಫೆಬ್ರವರಿ 16ರಂದು ರಾಜ್ಯ ಬಜೆಟ್​ ಮಂಡಿಸಲು ನಿರ್ಧರಿಸಲಾಗಿದೆ. ಇದು ಮಹತ್ವದ ಬಜೆಟ್​ ಆಗಿದ್ದು, ರಾಜ್ಯದಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ ಪಕ್ಷದ ಬಜೆಟ್​​ ಮೇಲೆ ಜನ ಸಾಮಾನ್ಯರ ನಿರೀಕ್ಷೆಯೂ ಹೆಚ್ಚಾಗಿದೆ. ಇನ್ನೂ ಸಿದ್ದರಾಮಯ್ಯ ವಿತ್ತ ಮಂತ್ರಿಯಾಗಿಯೂ ಮುಖ್ಯಮಂತ್ರಿಯಾಗಿಯೂ 15ನೇ ಬಜೆಟ್​ ಮಂಡಿಸಲಿದ್ದಾರೆ.

ವಿಧಾನಮಂಡಲ ಅಧಿವೇಶನ ಅಧಿವೇಶನ ಮೊದಲ ದಿನ ಅಂದರೆ ಫೆಬ್ರವರಿ 12ರಂದು ರಾಜ್ಯಪಾಲ ಥಾವರ್​ ಚಂದ್​ ಹೆಹ್ಲೋಟ್​ ಅವರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಲೋಕಸಭೆ ಚುನಾವಣೆಗೆ ಮಾರ್ಚ್​ ನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿಯಲ್ಲೆ ಬಜೆಟ್​ ಮಂಡಿಸಲು ತೀರ್ಮಾನಿಸಿದ್ದಾರೆ.

Comments (0)

Your email address will not be published. Required fields are marked *

Back to top button