#Exclusive News

ಶಿಮ್ಲಾದಲ್ಲಿ ಸ್ಪೀಕರ್ ಯುಟಿ ಖಾದರ್

Bengaluru :

ಕರ್ನಾಟಕ ವಿಧಾನ ಮಂಡಲದಲ್ಲಿ ಇ-ಲೆಜಿಸ್ಲೇಚರ್(ಇ-ವಿಧಾನ ಯೋಜನೆ) ಜಾರಿ ಸಂಬಂಧ ಅಧ್ಯಯನ ಪ್ರವಾಸದಲ್ಲಿರುವ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ , ಶಿಮ್ಲಾದಲ್ಲಿ ಹಿಮಾಚಲ ಪ್ರದೇಶದ ವಿಧಾನ ಸಭೆಯ ಸಭಾಧ್ಯಕ್ಷರಾದ ಕುಲದೀಪ್ ಸಿಂಘ್ ಪತಾನಿಯ ಅವರನ್ನು ಭೇಟಿ ಮಾಡಿ, ಅಗತ್ಯ ಮಾಹಿತಿಯನ್ನು ಪಡೆದರು. ಈ ವೇಳೆ ಹಿಮಾಚಲ ಪ್ರದೇಶದ ವಿಧಾನಸಭೆಯ ಇತರೆ ಕಾರ್ಯ ಚಟುವಟಿಕೆಗಳ ಬಗ್ಗೆಯೂ ಸಹ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಹಿಮಾಚಲ ಪ್ರದೇಶ ವಿಧಾನ ಸಭೆಯ ಕಾರ್ಯದರ್ಶಿ ಯಶಪಾಲ್ ಶರ್ಮಾ, ಕರ್ನಾಟಕ ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಮತ್ತು ವಿಧಾನ ಪರಿಷತ್ತಿನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments (0)

Your email address will not be published. Required fields are marked *

Back to top button