Sports

ಟೀಂ ಇಂಡಿಯಾಗೆ ಬಿಗ್ ಶಾಕ್; ಆಸ್ಪತ್ರೆಗೆ ದಾಖಲಾದ ಅಭಿಷೇಕ್ ಶರ್ಮಾ..!

ಟೀಂ ಇಂಡಿಯಾದ ಉದಯೋನ್ಮುಖ ತಾರೆ ಅಭಿಷೇಕ್ ಶರ್ಮಾ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿರುವುದು ಟಿ20 ವಿಶ್ವಕಪ್ 2026ರ ನಡುವೆ ಆತಂಕ ಮೂಡಿಸಿದೆ.

ಟಿ20 ವಿಶ್ವಕಪ್‌ನಲ್ಲಿ ಶುಭಾರಂಭ ಮಾಡಿರುವ ಟೀಂ ಇಂಡಿಯಾ ಈಗ ದೆಹಲಿಯಲ್ಲಿ ನಮೀಬಿಯಾ ವಿರುದ್ಧದ ಎರಡನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಆದರೆ, ಈ ಪಂದ್ಯಕ್ಕೂ ಮುನ್ನ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರು ಹೊಟ್ಟೆಯ ಸೋಂಕಿನಿಂದಾಗಿ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಸ್ತುತ ವಿವಿಧ ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಲಾಗಿದೆ. ಗುರುವಾರ ನಡೆಯಲಿರುವ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಅವರು ಕಣಕ್ಕಿಳಿಯುವುದು ಬಹುತೇಕ ಅನುಮಾನ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಭಾರತ ತಂಡವು ಫೆಬ್ರವರಿ 15ರಂದು ಕೊಲಂಬೊದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಹೈವೋಲ್ಟೇಜ್ ಪಂದ್ಯವನ್ನು ಆಡಲಿದ್ದು, ಅಷ್ಟರೊಳಗೆ ಅಭಿಷೇಕ್ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. ಇಂದು ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದ್ದರೂ, ಪೂರ್ಣ ಪ್ರಮಾಣದ ಫಿಟ್‌ನೆಸ್ ಪಡೆಯಲು ಕೆಲ ದಿನಗಳ ಕಾಲ ವಿಶ್ರಾಂತಿಯ ಅಗತ್ಯವಿರಬಹುದು ಎಂದು ಹೇಳಲಾಗುತ್ತಿದೆ.

Comments (0)

Your email address will not be published. Required fields are marked *

Back to top button