ರಾಜ್ಯಸುದ್ದಿ

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ: 15 ಮಂದಿ ಕಾರ್ಮಿಕರಿಗೆ ಗಾಯ

ಆನೇಕಲ್​ : ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 15 ಜನ ಕಾರ್ಮಿಕರು ಗಾಯಗೊಂಡ ಘಟನೆ ಬೆಂಗಳೂರಿನ ಆನೇಕಲ್​ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಗಾಯಾಳು ಕಾರ್ಮಿಕರನ್ನು ಆನೇಕಲ್​ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ಇದೆ. ಎರಡನೇ ಅಂತಸ್ತಿನ ನಿರ್ಮಾಣದ ವೇಳೆ ಕಟ್ಟಡ ಕುಸಿದಿದೆ. ಸ್ಥಳಕ್ಕೆ ಆನೇಕಲ್​ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

https://www.youtube.com/watch?v=D_-Jyaxts-k

Comments (0)

Your email address will not be published. Required fields are marked *

Back to top button