ಜಿಲ್ಲೆಸುದ್ದಿ

ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಡಿಕ್ಕಿ

ಮೈಸೂರು : ನಗರ ಸಾರಿಗೆ ಬಸ್ ನಿಲ್ದಾಣದ ಮುಂಭಾಗ ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದೆ. ಸಾರಿಗೆ ಬಸ್‌ಗಳು ಮತ್ತು ಆಟೋ ನಡುವೆ ಈ ಡಿಕ್ಕಿ ನಡೆದಿದ್ದು, ಘಟನೆಯಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಚಲಿಸುತ್ತಿದ್ದ ಬಸ್‌ನ ಬ್ರೇಕ್ ದಿಢೀರ್ ಕೈಕೊಟ್ಟಿದ್ದರಿಂದ ನಿಯಂತ್ರಣ ತಪ್ಪಿದ ಬಸ್ ಮುಂದಿದ್ದ ಮತ್ತೊಂದು ನಗರ ಸಾರಿಗೆ ಬಸ್‌ಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಈ ವೇಳೆ ಡಿಕ್ಕಿಯ ರಭಸಕ್ಕೆ ಮುಂದಕ್ಕೆ ಚಲಿಸಿದ ಬಸ್ ತನ್ನ ಮುಂದಿದ್ದ ಆಟೋ ರಿಕ್ಷಾಕ್ಕೂ ಡಿಕ್ಕಿ ಹೊಡೆದಿದ್ದು, ಸರಣಿ ಅಪಘಾತಕ್ಕೆ ಕಾರಣವಾಯಿತು.ಅಪಘಾತದ ತೀವ್ರತೆಗೆ ಎರಡು ಸರ್ಕಾರಿ ಬಸ್‌ಗಳು ಹಾಗೂ ಒಂದು ಆಟೋ ರಿಕ್ಷಾ ಸ್ಥಳದಲ್ಲೇ ಜಖಂಗೊಂಡಿವೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲವಾದರೂ, ವಾಹನಗಳು ರಸ್ತೆಯ ಮಧ್ಯದಲ್ಲೇ ನಿಂತಿದ್ದರಿಂದ ಮೈಸೂರಿನ ನಗರ ಸಾರಿಗೆ ಬಸ್ ನಿಲ್ದಾಣದ ಸುತ್ತಮುತ್ತ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಬ್ರೇಕ್ ಫೇಲ್ ಆಗಿರುವ ಬಗ್ಗೆ ತಾಂತ್ರಿಕ ಪರಿಶೀಲನೆ ನಡೆಸಲಾಗುತ್ತಿದ್ದು, ಸಾರ್ವಜನಿಕರು ಸಾರಿಗೆ ಬಸ್‌ಗಳ ನಿರ್ವಹಣೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Comments (0)

Your email address will not be published. Required fields are marked *

Back to top button