Sunday, February 15, 2026
29.6 C
Bengaluru
Google search engine
LIVE
ಮನೆರಾಜಕೀಯಶಾಸಕರ ವಿದೇಶ ಪ್ರವಾಸ ಸಮರ್ಥಿಸಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

ಶಾಸಕರ ವಿದೇಶ ಪ್ರವಾಸ ಸಮರ್ಥಿಸಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

ಸಚಿವ ಪ್ರಿಯಾಂಕ್ ಖರ್ಗೆ ಅವರು ಶಾಸಕರ ವಿದೇಶ ಪ್ರವಾಸದ ವಿಚಾರವನ್ನು ಸಮರ್ಥಿಸಿಕೊಂಡಿದ್ದು, ಶಾಸಕರು ಖಾಸಗಿಯಾಗಿ ಪ್ರವಾಸಕ್ಕೆ ಹೋದರೆ ತಡೆಯಲು ಸಾಧ್ಯವೇ ಎಂದು ಪ್ರಶ್ನಿಸುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕುರಿತು ಯಾವುದೇ ಗೊಂದಲವಿಲ್ಲ ಮತ್ತು ಹೈಕಮಾಂಡ್ ಈಗಾಗಲೇ ಈ ಬಗ್ಗೆ ಸ್ಪಷ್ಟನೆ ನೀಡಿದೆ ಎಂದು ತಿಳಿಸಿದ ಅವರು, ಬಿಜೆಪಿ ತನ್ನ ಒಳಜಗಳ ಮುಚ್ಚಿಡಲು ಕಾಂಗ್ರೆಸ್ ಮೇಲೆ ಬೆರಳು ತೋರಿಸುತ್ತಿದೆ ಎಂದು ಕಿಡಿಕಾರಿದರು. ಸರ್ಕಾರದ ಸಾವಿರ ದಿನಗಳ ಸಂಭ್ರಮದ ಕಾರ್ಯಕ್ರಮದ ಬಗ್ಗೆ ವಿರೋಧ ಪಕ್ಷದ ಟೀಕೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಜನೋಪಯೋಗಿ ಚರ್ಚೆ ನಡೆಸಲು ಬಿಡದ ಬಿಜೆಪಿ, ಸರ್ಕಾರದ ಒಳ್ಳೆಯ ಕೆಲಸಗಳನ್ನು ಸಹಿಸಲಾಗದೆ ವಿನಾಕಾರಣ ವಾಗ್ದಾಳಿ ನಡೆಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ಪೂರ್ವ ನಿಗಧಿತ ಕಾರ್ಯಕ್ರಮಗಳಿದ್ದ ಕಾರಣ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗಲಿಲ್ಲ ಎಂದು ಸ್ಪಷ್ಟಪಡಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments