ಮನರಂಜನೆಸಿನಿಮಾಸುದ್ದಿ

ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟನಿಂದ ಬಿಗ್ ಅಪ್‌ಡೇಟ್; ನಟನೆಯ ಜೊತೆಗೆ ನಿರ್ದೇಶನ

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿಜೇತ ಗಿಲ್ಲಿ ನಟ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ವಿವಿಧ ಸಾರ್ವಜನಿಕ ಕಾರ್ಯಕ್ರಮ ಹಾಗೂ ಉತ್ಸವಗಳಲ್ಲಿ ಭಾಗವಹಿಸುತ್ತಾ ಅಭಿಮಾನಿಗಳ ಮನಗೆಲ್ಲುತ್ತಿರುವ ಅವರು, ಈಗ ತಮ್ಮ ವೃತ್ತಿಜೀವನದ ಬಹುದೊಡ್ಡ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ. ನಟನೆಯ ಜೊತೆಗೆ ನಿರ್ದೇಶನದತ್ತಲೂ ಆಸಕ್ತಿ ಹೊಂದಿರುವ ಗಿಲ್ಲಿ ನಟ, ಶೀಘ್ರದಲ್ಲೇ ಬೆಳ್ಳಿತೆರೆಯ ಮೇಲೆ ಚೊಚ್ಚಲ ಸಿನಿಮಾ ನಿರ್ದೇಶನ ಮಾಡಲು ಸಜ್ಜಾಗಿದ್ದಾರೆ.

ಈಗಾಗಲೇ ಹಾಸ್ಯ ಪ್ರಧಾನ ಕಿರುಚಿತ್ರಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಅವರಿಗೆ ನಿರ್ದೇಶನದ ಅನುಭವವಿದೆ. ತಮ್ಮದೇ ಆದ ವಿಶಿಷ್ಟ ಶೈಲಿಯ ಕಿರುಚಿತ್ರಗಳ ಮೂಲಕ ಫೇಮಸ್ ಆಗಿದ್ದ ಅವರು, ಈಗ ಪೂರ್ಣ ಪ್ರಮಾಣದ ಸಿನಿಮಾ ಮಾಡಲು ಕಥೆಯನ್ನು ಸಿದ್ಧಪಡಿಸಿಕೊಂಡಿದ್ದಾರೆ. ಸದ್ಯ ವಿವಿಧ ಉತ್ಸವಗಳ ಭೇಟಿಯಲ್ಲಿ ಬ್ಯುಸಿಯಾಗಿರುವ ಅವರು, ಈ ಕಾರ್ಯಕ್ರಮಗಳು ಮುಗಿದ ನಂತರ ಅಧಿಕೃತವಾಗಿ ಸ್ಕ್ರಿಪ್ಟ್ ಬರೆಯುವ ಕೆಲಸಕ್ಕೆ ಚಾಲನೆ ನೀಡಲಿದ್ದಾರೆ.

ನಟನೆಗಿಂತ ನಿರ್ದೇಶನವು ಹೆಚ್ಚು ಜವಾಬ್ದಾರಿಯುತ ಮತ್ತು ಶ್ರಮದಾಯಕ ಕೆಲಸವಾಗಿದ್ದರೂ, ಗಿಲ್ಲಿ ನಟ ಈ ಸವಾಲನ್ನು ಸ್ವೀಕರಿಸಲು ಉತ್ಸುಕರಾಗಿದ್ದಾರೆ. ಬಿಗ್ ಬಾಸ್ ಗೆದ್ದ ಒಂದು ತಿಂಗಳ ನಂತರವೂ ಅವರ ಹವಾ ಕಡಿಮೆಯಾಗಿಲ್ಲ, ಎಲ್ಲಿ ಹೋದರೂ ಅಭಿಮಾನಿಗಳು ಅವರನ್ನು ಮುತ್ತಿಕೊಳ್ಳುತ್ತಿದ್ದಾರೆ. ಈ ಹೊಸ ಅಪ್‌ಡೇಟ್ ಕೇಳಿ ಅವರ ಅಭಿಮಾನಿ ಬಳಗ ಫುಲ್ ಖುಷ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button