ಸಿನಿಮಾ

ಟಾಕ್ಸಿಕ್’ ಹವಾ ಶುರು; ನಾಳೆ ಬೆಳಿಗ್ಗೆ ಯಶ್ ಅಭಿಮಾನಿಗಳಿಗೆ ಬಿಗ್ ಸರ್​​ಪ್ರೈಸ್!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಭರ್ಜರಿ ಸಿಹಿ ಸುದ್ದಿ ನೀಡಿದೆ. ಬಹುನಿರೀಕ್ಷಿತ ಈ ಚಿತ್ರದ ಹೊಸ ಟೀಸರ್ ಫೆಬ್ರವರಿ 20ರಂದು ಬೆಳಿಗ್ಗೆ 9:35ಕ್ಕೆ ಬಿಡುಗಡೆಯಾಗಲಿದ್ದು, ಇದು ಯಶ್ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಚಿತ್ರದ ಪ್ರಚಾರ ಕಾರ್ಯ ಚುರುಕುಗೊಳಿಸಿರುವ ತಂಡವು, ಟೀಸರ್ ಮೂಲಕ ದೊಡ್ಡ ಮಟ್ಟದ ಸರ್ಪ್ರೈಸ್ ನೀಡಲು ಸಜ್ಜಾಗಿದೆ.

ಈ ಮೊದಲು ಬಿಡುಗಡೆಯಾಗಿದ್ದ ಯಶ್ ಅವರ ‘ರಾಯ’ ಪಾತ್ರದ ಪರಿಚಯಾತ್ಮಕ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಸೃಷ್ಟಿಸಿತ್ತು. ಇದೀಗ ಹೊಸ ಟೀಸರ್‌ನಲ್ಲಿ ಚಿತ್ರದ ಕಥಾಹಂದರ ಅಥವಾ ಪಾತ್ರಗಳ ಬಗ್ಗೆ ಹೆಚ್ಚಿನ ಸುಳಿವು ಸಿಗುವ ಸಾಧ್ಯತೆ ಇದೆ. ಈ ಸಿನಿಮಾ ರೆಟ್ರೋ ಶೈಲಿಯಲ್ಲಿ ಮೂಡಿಬರುತ್ತಿರುವುದು ವಿಶೇಷವಾಗಿದ್ದು, ಚಿತ್ರದ ಮೇಕಿಂಗ್ ಬಗ್ಗೆ ಈಗಾಗಲೇ ಸಿನಿರಂಗದಲ್ಲಿ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ.

ಸಿನಿಮಾ ಬಿಡುಗಡೆ ತಡವಾಗಬಹುದು ಎಂಬ ವದಂತಿಗಳಿಗೆ ತೆರೆ ಎಳೆದಿರುವ ಚಿತ್ರತಂಡ, ಅಧಿಕೃತವಾಗಿ ಬಿಡುಗಡೆಯ ದಿನಾಂಕವನ್ನು ಸ್ಪಷ್ಟಪಡಿಸಿದೆ. ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19 ರಂದು ವಿಶ್ವಾದ್ಯಂತ ತೆರೆಗೆ ಬರಲಿದ್ದು, ಯಶ್ ಅವರನ್ನು ಮತ್ತೆ ಬೆಳ್ಳಿತೆರೆಯ ಮೇಲೆ ನೋಡಲು ಸಿನಿಪ್ರಿಯರು ಕಾತರರಾಗಿದ್ದಾರೆ. ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ ಮತ್ತು ಹುಮಾ ಖುರೇಶಿ ಅಂತಹ ಸ್ಟಾರ್ ಕಲಾವಿದರು ಅಭಿನಯಿಸಿದ್ದಾರೆ.

ಮಾರ್ಚ್ ಮೊದಲ ವಾರದಲ್ಲಿ ಸಿನಿಮಾದ ಅಧಿಕೃತ ಟ್ರೇಲರ್ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಅದಕ್ಕೂ ಮುನ್ನ ಈ ಟೀಸರ್ ಪ್ರಚಾರಕ್ಕೆ ಅದ್ದೂರಿ ಚಾಲನೆ ನೀಡಲಿದೆ. ಸಿನಿಮಾ ತಂಡವು ಬಿಡುಗಡೆ ಮಾಡಿರುವ ಪೋಸ್ಟರ್‌ಗಳು ಅಭಿಮಾನಿಗಳ ಕ್ರೇಜ್ ಅನ್ನು ದುಪ್ಪಟ್ಟುಗೊಳಿಸಿವೆ. ಈ ಹೊಸ ಟೀಸರ್ ಮೂಲಕ ಯಶ್ ತಮ್ಮ ಅಭಿಮಾನಿಗಳಿಗೆ ಯಾವ ರೀತಿಯ ದೃಶ್ಯವೈಭವ ತೋರಿಸಲಿದ್ದಾರೆ ಎಂಬುದು ನಾಳೆ ಬೆಳಗ್ಗೆಬಹಿರಂಗವಾಗಲಿದೆ.

Comments (0)

Your email address will not be published. Required fields are marked *

Back to top button