Top Newsಜಿಲ್ಲೆಸುದ್ದಿ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಮನಗರ ಪ್ರವಾಸ..!

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಮನಗರ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಬನ್ನಿಕುಪ್ಪೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರಿನಿಂದ ರಸ್ತೆ ಮಾರ್ಗದ ಮೂಲಕ ರಾಮನಗರ ತಾಲೂಕಿನ ಬನ್ನಿಕುಪ್ಪೆ ಗ್ರಾಮಕ್ಕೆ ಆಗಮಿಸಲಿರುವ ಸಚಿವರು, ಅಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ‘ವೇದವಿದ್ಯಾ ವಿಹಾರ ಗುರುಕುಲ’ದ ಶಂಕುಸ್ಥಾಪನಾ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ. ಭಾರತೀಯ ಸಂಸ್ಕೃತಿ ಮತ್ತು ವೇದ ಶಿಕ್ಷಣಕ್ಕೆ ಒತ್ತು ನೀಡುವ ಈ ಗುರುಕುಲದ ಸ್ಥಾಪನೆಯು ಜಿಲ್ಲೆಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೊಸ ವೇದಿಕೆ ಕಲ್ಪಿಸಲಿದೆ.

ಈ ಕಾರ್ಯಕ್ರಮವು ಖಾಸಗಿ ಆಗಿರುವುದರಿಂದ ಕೇವಲ ಆಹ್ವಾನಿತರಿಗಷ್ಟೇ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸಚಿವರ ಭೇಟಿಯ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯು ರಾಮನಗರ ಮತ್ತು ಬನ್ನಿಕುಪ್ಪೆ ಸುತ್ತಮುತ್ತ ಬಿಗಿ ಬಂದೋಬಸ್ತ್ ನಿಯೋಜಿಸಿದೆ. ಶಂಕುಸ್ಥಾಪನಾ ಕಾರ್ಯಕ್ರಮದ ಬಳಿಕ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಸಚಿವರು ಮರಳಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೇಂದ್ರದ ಗಣ್ಯ ವ್ಯಕ್ತಿಗಳ ಭೇಟಿ ಹೆಚ್ಚುತ್ತಿದ್ದು, ಸಚಿವರ ಇಂದಿನ ಕಾರ್ಯಕ್ರಮವು ಸ್ಥಳೀಯವಾಗಿ ಸಾಕಷ್ಟು ಕುತೂಹಲ ಮೂಡಿಸಿದೆ.

Comments (0)

Your email address will not be published. Required fields are marked *

Back to top button