Sunday, February 22, 2026
18.5 C
Bengaluru
Google search engine
LIVE
ಮನೆಜಿಲ್ಲೆಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತೆಯರ ಮೇಲೆ ಲೈಂಗಿಕ ಕಿರುಕುಳ; ಕಾಮುಕ ವೃದ್ಧನ ಬಂಧನ!

ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತೆಯರ ಮೇಲೆ ಲೈಂಗಿಕ ಕಿರುಕುಳ; ಕಾಮುಕ ವೃದ್ಧನ ಬಂಧನ!

ಬೆಂಗಳೂರು: ಆನೇಕಲ್‌ನಲ್ಲಿ ಚಾಕೊಲೇಟ್ ಆಸೆ ತೋರಿಸಿ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ 64 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯರ ಪೋಷಕರು ಪ್ರತಿದಿನ ಬೆಳಗ್ಗೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಮಕ್ಕಳನ್ನು ಶಾಲೆಯ ಬಳಿ ಬಿಟ್ಟು ಹೋಗುತ್ತಿದ್ದರು. ಶಾಲೆ ಆರಂಭವಾಗಲು ಇನ್ನು ಸಮಯವಿದೆ ಎಂಬುದನ್ನು ಗಮನಿಸಿದ ವೃದ್ಧ, ಒಂಟಿಯಾಗಿದ್ದ ಬಾಲಕಿಯರನ್ನು ಚಾಕೊಲೇಟ್ ನೀಡುವುದಾಗಿ ನಂಬಿಸಿ ತನ್ನ ವಿಕೃತ ಚಟಕ್ಕೆ ಬಳಸಿಕೊಳ್ಳುತ್ತಿದ್ದ ಎಂದು ತಿಳಿದುಬಂದಿದೆ. ಎರಡನೇ ತರಗತಿಯ ಬಾಲಕಿಯೊಬ್ಬಳಿಗೆ ಕಿರುಕುಳ ನೀಡಿದಾಗ, ಆಕೆ ಮನೆಯಲ್ಲಿ ಪೋಷಕರಿಗೆ ತಿಳಿಸಿದ್ದಾಳೆ.

ಪೋಷಕರು ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದಾಗ, ಕೇವಲ ಒಬ್ಬಳಲ್ಲದೆ ಒಟ್ಟು ಮೂವರು ಮಕ್ಕಳಿಗೆ ಈತ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಪೋಷಕರು ಆನೇಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪೊಲೀಸರು ವೃದ್ಧನನ್ನು ಬಂಧಿಸಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments