Sunday, February 22, 2026
31 C
Bengaluru
Google search engine
LIVE
ಮನೆ#Exclusive NewsTop Newsಮಾಜಿ ಶಾಸಕ ಸುರೇಶ್ ಗೌಡ ಕಾರು ಭೀಕರ ಅಪಘಾತ..!

ಮಾಜಿ ಶಾಸಕ ಸುರೇಶ್ ಗೌಡ ಕಾರು ಭೀಕರ ಅಪಘಾತ..!

ಮಂಡ್ಯ: ಬೊಂತೆಕೊಪ್ಪಲು ಸಮೀಪ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಅವರು ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯಲ್ಲೇ ಪಲ್ಟಿಯಾಗಿದ್ದು, ಅಪಘಾತದ ರಭಸಕ್ಕೆ ವಾಹನವು ಭಾಗಶಃ ಜಖಂಗೊಂಡಿದೆ. ಕಾರ್ಯಕರ್ತರೊಬ್ಬರ ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಈ ಅಚಾತುರ್ಯ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಸುರೇಶ್ ಗೌಡ ಅವರ ಕೈಗೆ ಗಂಭೀರ ಪೆಟ್ಟು ಬಿದ್ದಿದ್ದು, ಅವರ ಜೊತೆಗಿದ್ದ ಚಾಲಕನಿಗೂ ಗಾಯಗಳಾಗಿವೆ. ಕಾರು ಪಲ್ಟಿಯಾದ ಕೂಡಲೇ ಸುರೇಶ್ ಗೌಡ ಅವರ ಗನ್‌ಮ್ಯಾನ್ ತುರ್ತಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಸ್ಥಳೀಯರು ಗಾಯಾಳುಗಳನ್ನು ಮಂಡ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.

ಹೆಚ್ಚಿನ ಮತ್ತು ಉನ್ನತ ಚಿಕಿತ್ಸೆಯ ಅಗತ್ಯವಿದ್ದ ಹಿನ್ನೆಲೆಯಲ್ಲಿ, ಸುರೇಶ್ ಗೌಡ ಮತ್ತು ಚಾಲಕನನ್ನು ಮಂಡ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಸದ್ಯ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments