Sunday, February 22, 2026
29.8 C
Bengaluru
Google search engine
LIVE
ಮನೆ#Exclusive NewsTop Newsಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರರಿದ್ದಾರೆ?ಬಿಜೆಪಿ ಶಾಸಕನ ಪರ ಕೆ.ಎನ್. ರಾಜಣ್ಣ ಬ್ಯಾಟಿಂಗ್!

ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರರಿದ್ದಾರೆ?ಬಿಜೆಪಿ ಶಾಸಕನ ಪರ ಕೆ.ಎನ್. ರಾಜಣ್ಣ ಬ್ಯಾಟಿಂಗ್!

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಚಿವ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಶಾಸಕರ ಪರವಾಗಿ ರಾಜಣ್ಣ ಮರುಕ ವ್ಯಕ್ತಪಡಿಸಿರುವುದು ಹಲವರ ಹುಬ್ಬೇರಿಸುವಂತೆ ಮಾಡಿದೆ.

“ನಾವು ಆತನ ಬಗ್ಗೆ ಮರುಕ ವ್ಯಕ್ತಪಡಿಸಬೇಕು ಅಷ್ಟೇ. ಸತ್ಯಹರಿಶ್ಚಂದ್ರನ ಮಕ್ಕಳು ಯಾರು ಇದ್ದಾರೆ ಹೇಳಿ ನೋಡೋಣ? ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರ ಇದ್ದಾರೆ?” ಎಂದು ಪ್ರಶ್ನಿಸುವ ಮೂಲಕ ರಾಜಕೀಯ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರವನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. “ಇವನ್ಯಾರೋ ಒಬ್ಬ ಬಡಪಾಯಿ ಸಿಕ್ಕಿಹಾಕಿಕೊಂಡಿದ್ದಾನೆ ಅಷ್ಟೇ” ಎಂದು ಹೇಳುವ ಮೂಲಕ ಶಾಸಕ ಲಮಾಣಿ ಅವರ ಲಂಚದ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ.

ಚೆಕ್ ಡ್ಯಾಂ ಕಾಮಗಾರಿಗೆ ಸಂಬಂಧಿಸಿದಂತೆ ಗುತ್ತಿಗೆದಾರನಿಂದ ಕಮಿಷನ್ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಶಾಸಕರನ್ನು ಬಂಧಿಸಿದ್ದರು. ಈ ಘಟನೆಯಿಂದಾಗಿ ಬಿಜೆಪಿಗೆ ತೀವ್ರ ಮುಜುಗರ ಉಂಟಾಗಿದ್ದು, ಕಾಂಗ್ರೆಸ್ ನಾಯಕರು ಇದನ್ನು ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ, ಕಾಂಗ್ರೆಸ್‌ನವರೇ ಆದ ರಾಜಣ್ಣ ಅವರು “ಎಲ್ಲಾ ಪಕ್ಷಗಳಲ್ಲೂ ಇಂತವರು ಇರುತ್ತಾರೆ” ಎಂಬ ಅರ್ಥದಲ್ಲಿ ಮಾತನಾಡಿರುವುದು ಸ್ವಪಕ್ಷದವರಿಗೂ ಅಚ್ಚರಿ ಮೂಡಿಸಿದೆ.

ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಚಂದ್ರು ಲಮಾಣಿ ಮತ್ತು ಅವರ ಇಬ್ಬರು ಸಹಾಯಕರು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ರಾಜಣ್ಣ ಅವರ ಈ “ಸತ್ಯಹರಿಶ್ಚಂದ್ರ” ಹೇಳಿಕೆಯು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಭ್ರಷ್ಟಾಚಾರದ ವಿರುದ್ಧದ ಹೋರಾಟದ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಂಗ್ಯದ ಮಾತುಗಳು ಕೇಳಿಬರುತ್ತಿವೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments