ಜಿಲ್ಲೆಸುದ್ದಿ

ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು..?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ಪ್ರಮುಖ ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪವಿತ್ರ ಎಂಬ ಮಹಿಳೆಯು ನೀಡಿರುವ ದೂರಿನ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದ್ದು, ಸ್ನೇಹಮಯಿ ಕೃಷ್ಣ ಅವರನ್ನು ಎ1 ಆರೋಪಿಯನ್ನಾಗಿ ಮಾಡಲಾಗಿದೆ.

ಪವಿತ್ರ ಅವರು ತಮ್ಮ ದೂರಿನಲ್ಲಿ, ಪ್ರೊ. ಮೈಲಾರಪ್ಪ ವಿರುದ್ಧ ನೀಡಿದ್ದ ಪ್ರಕರಣವನ್ನು ಹಿಂಪಡೆಯುವಂತೆ ಸ್ನೇಹಮಯಿ ಕೃಷ್ಣ ಅವರು ತಮಗೆ ನಿರಂತರವಾಗಿ ಒತ್ತಡ ಹೇರುತ್ತಿದ್ದಾರೆ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಬೆದರಿಕೆ ಮತ್ತು ಒತ್ತಡ ಹೇರಿದ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮುಡಾ ಹಗರಣದ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಸ್ನೇಹಮಯಿ ಕೃಷ್ಣ ಅವರಿಗೆ ಈ ಹೊಸ ಕಾನೂನು ಸಂಘರ್ಷವು ಮತ್ತೊಂದು ಸವಾಲಾಗಿ ಪರಿಣಮಿಸಿದೆ. ಈಗಾಗಲೇ ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಅವರು, ಈಗ ಮಹಿಳೆಯೊಬ್ಬರ ದೂರಿನ ಮೇರೆಗೆ ಪೊಲೀಸ್ ವಿಚಾರಣೆಗೆ ಗುರಿಯಾಗುವ ಸಾಧ್ಯತೆಯಿದೆ.

Comments (0)

Your email address will not be published. Required fields are marked *

Back to top button