Tuesday, February 24, 2026
19.8 C
Bengaluru
Google search engine
LIVE
ಮನೆUncategorizedದೆಹಲಿ AI ಶೃಂಗಸಭೆಯಲ್ಲಿ ಅರೆನಗ್ನ ಪ್ರತಿಭಟನೆ; ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠ!

ದೆಹಲಿ AI ಶೃಂಗಸಭೆಯಲ್ಲಿ ಅರೆನಗ್ನ ಪ್ರತಿಭಟನೆ; ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠ!

ದೆಹಲಿ: ಭಾರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಸಮ್ಮಿಟ್’ ವೇಳೆ ಯುವ ಕಾಂಗ್ರೆಸ್ ನಾಯಕರು ನಡೆಸಿದ ಅರೆನಗ್ನ ಪ್ರತಿಭಟನೆಯು ಈಗ ಸ್ವಪಕ್ಷದ ನಾಯಕರಿಂದಲೇ ಟೀಕೆಗೆ ಗುರಿಯಾಗಿದೆ. ಅಂತರರಾಷ್ಟ್ರೀಯ ಮಟ್ಟದ ಗಣ್ಯರು ಮತ್ತು ಹೂಡಿಕೆದಾರರು ಭಾಗವಹಿಸಿದ್ದ ಇಂತಹ ಪ್ರತಿಷ್ಠಿತ ವೇದಿಕೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದು ಸಭ್ಯತೆಯ ಗಡಿ ಮೀರಿದ ನಡವಳಿಕೆ ಎಂದು ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೇಟ್ ಆಳ್ವಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಂತರರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಶಿಸ್ತು, ಘನತೆ ಮತ್ತು ಜವಾಬ್ದಾರಿ ಬಹಳ ಮುಖ್ಯ ಎಂದು ಯುವ ನಾಯಕರಿಗೆ ಶಿಸ್ತಿನ ಪಾಠ ಮಾಡಿದ್ದಾರೆ.ಈ ಘಟನೆಯು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಕೂಡ ಇದನ್ನು ‘ನಾಚಿಕೆಗೇಡಿನ ಸಂಗತಿ’ ಎಂದು ಕರೆದಿದ್ದಾರೆ. 10 ಮಂದಿ ಯುವ ಕಾಂಗ್ರೆಸ್ ನಾಯಕರು ಏಕಾಏಕಿ ಶರ್ಟ್ ಕಳಚಿ ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಯುವ ಕಾಂಗ್ರೆಸ್ ರಾಷ್ಟ್ರೀಯ ಸಂಯೋಜಕ ನರಸಿಂಹ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದರು.

ಈ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇದು ಕಾಂಗ್ರೆಸ್ ಪಕ್ಷದ ‘ಬೆತ್ತಲೆ ಮತ್ತು ದಿವಾಳಿ ರಾಜಕಾರಣ’ಕ್ಕೆ ಸಾಕ್ಷಿ ಎಂದು ಕಿಡಿಕಾರಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments