Wednesday, April 30, 2025
24 C
Bengaluru
LIVE
ಮನೆಜಿಲ್ಲೆಮಂತ್ರಾಲಯದಲ್ಲಿ 36 ಅಡಿಯ ಶ್ರೀ ಅಭಯರಾಮ ಮೂರ್ತಿ ಸ್ಥಾಪನೆ

ಮಂತ್ರಾಲಯದಲ್ಲಿ 36 ಅಡಿಯ ಶ್ರೀ ಅಭಯರಾಮ ಮೂರ್ತಿ ಸ್ಥಾಪನೆ

ಮಂತ್ರಾಲಯದಲ್ಲಿ 36 ಅಡಿ ಎತ್ತರದ ಭವ್ಯವಾದ ಶ್ರೀ ಅಭಯ ರಾಮ ಮೂರ್ತಿಯ ಕೆತ್ತನೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಶ್ರೀ ಅಭಯ ಆಂಜನೇಯ ದೇವಸ್ಥಾನದ ಎದುರಗಡೆ ಗೊತ್ತುಪಡಿಸಿದ ಸ್ಥಳದಲ್ಲಿ ಸ್ಥಾಪನೆ ಮಾಡಲಾಯಿತು.

ಮೂರ್ತಿ ಪ್ರತಿಷ್ಠಾಪನೆಯ ಮೊದಲು ನಡೆಸುವ ಕೆಲವು ಆಧ್ಯಾತ್ಮಿಕ ಆಚರಣೆಗಳನ್ನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಕೈಗೊಂಡರು.

ಮೂರ್ತಿ ಪ್ರತಿಷ್ಠಾಪನೆ ಮಾಡುವ ಪೀಠದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಕೈಗೊಂಡು ಕ್ರೇನ್ ಮೂಲಕ ಶ್ರೀ ಅಭಯ ರಾಮ ಮೂರ್ತಿಯನ್ನು ಪೀಠದಲ್ಲಿ ನಿಲ್ಲಿಸಲಾಯಿತು.

ಅಯೋಧ್ಯೆಯ ರಾಮಮಂದಿರಲ್ಲಿ ಜ. 22ರಂದು ಹಮ್ಮಿಕೊಂಡಿರುವ ಕಾರ್ಯಕ್ರಮದ ಅಂಗವಾಗಿ ಮಂತ್ರಾಲಯದಲ್ಲಿ ಶ್ರೀ ಅಭಯರಾಮ ಮೂರ್ತಿಗೆ ಸಾಂಕೇತಿಕವಾಗಿ ಪೂಜೆ ಸಲ್ಲಿಸಿ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತಿದೆ ಎಂದು ಶ್ರೀಮಠದಿಂದ ತಿಳಿಸಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments