Wednesday, February 25, 2026
28.8 C
Bengaluru
Google search engine
LIVE
ಮನೆ#Exclusive Newsಆರೋಗ್ಯ ಇಲಾಖೆ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಕೆ: ಕನ್ನಡ ನಿರ್ಲಕ್ಷಿಸಿದ ಕಾಂಗ್ರೆಸ್

ಆರೋಗ್ಯ ಇಲಾಖೆ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಕೆ: ಕನ್ನಡ ನಿರ್ಲಕ್ಷಿಸಿದ ಕಾಂಗ್ರೆಸ್

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧಿಕೃತ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉರ್ದು ಭಾಷೆಯಲ್ಲಿ ಪ್ರಕಟಿಸಿರುವುದು ಈಗ ರಾಜ್ಯಾದ್ಯಂತ ಭಾರಿ ವಿವಾದಕ್ಕೆ ನಾಂದಿ ಹಾಡಿದೆ.

ಹಿಮೋಫಿಲಿಯಾ ರೋಗಿಗಳಿಗೆ ಚಿಕಿತ್ಸೆ ಹಾಗೂ 108 ಆಂಬುಲೆನ್ಸ್ ಸೇವೆಗಳ ಲೋಕಾರ್ಪಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಆಡಳಿತ ಭಾಷೆ ಕನ್ನಡದ ಬದಲು ಉರ್ದುವಿನಲ್ಲಿ ಮುದ್ರಿಸಿರುವುದು ಕನ್ನಡ ಪರ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, “ಉರ್ದು ಮಾತನಾಡುವವರು ಕರ್ನಾಟಕದಲ್ಲಿ ಇಲ್ಲವೇ?” ಎಂದು ಪ್ರಶ್ನಿಸಿರುವುದು ವಿವಾದವನ್ನು ಮತ್ತಷ್ಟು ಕೆರಳಿಸಿದೆ.

ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಅವರು ಈ ಕ್ರಮವನ್ನು ಖಂಡಿಸಿದ್ದು, ಸರ್ಕಾರವು ಕನ್ನಡವನ್ನು ಕಡೆಗಣಿಸಿ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ನಿಯಮದ ಪ್ರಕಾರ ಆಹ್ವಾನ ಪತ್ರಿಕೆಗಳು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಇರಬೇಕಿದ್ದರೂ, ಶಿಷ್ಟಾಚಾರ ಉಲ್ಲಂಘಿಸಿ ಉರ್ದು ಬಳಸಿದ್ದು ಸರ್ಕಾರದ “ಉರ್ದು ವ್ಯಾಮೋಹ”ವನ್ನು ಎತ್ತಿ ತೋರಿಸುತ್ತಿದೆ ಎಂಬ ಟೀಕೆಗಳು ಕೇಳಿಬರುತ್ತಿವೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments