ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ ಭಾನುವಾರ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜಕೀಯ ಭವಿಷ್ಯ ಹಾಗೂ ಜಾಗತಿಕ ಸಂಘರ್ಷದ ಕುರಿತು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ಹೆಲಿಪ್ಯಾಡ್‌ನಲ್ಲಿ ಬೆಂಬಲಿಗರು “ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್” ಎಂದು ಘೋಷಣೆ ಕೂಗುತ್ತಿದ್ದಂತೆಯೇ, “ಶ್ರಮ ನಮ್ಮದು, ಫಲ ದೇವರದ್ದು” ಎಂದು ಮಾರ್ಮಿಕವಾಗಿ ಉತ್ತರಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ.
ಇದೇ ವೇಳೆ ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಯುದ್ಧದಿಂದ ನಿರಪರಾಧಿಗಳು ಮತ್ತು ಶಾಲಾ ಮಕ್ಕಳು ಬಲಿಯಾಗುತ್ತಿರುವುದು ದುಃಖಕರ ಸಂಗತಿ ಎಂದರು. ವಿದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಮುಖ್ಯಮಂತ್ರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಭರವಸೆ ನೀಡಿದ್ದಾರೆ.


