Tuesday, March 3, 2026
20.8 C
Bengaluru
Google search engine
LIVE
ಮನೆ#Exclusive NewsTop Newsಖಮೇನಿ ಹತ್ಯೆಗೆ ಗೌರಿಬಿದನೂರಲ್ಲಿ ಪ್ರತಿಭಟನೆಯ ಜ್ವಾಲೆ!

ಖಮೇನಿ ಹತ್ಯೆಗೆ ಗೌರಿಬಿದನೂರಲ್ಲಿ ಪ್ರತಿಭಟನೆಯ ಜ್ವಾಲೆ!

ಗೌರಿಬಿದನೂರು: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಹತ್ಯೆ ವರದಿಗಳ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ತೀವ್ರ ಆಕ್ರೋಶ ಮತ್ತು ಶೋಕ ವ್ಯಕ್ತವಾಗಿದೆ. ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿಯನ್ನು ಖಂಡಿಸಿ ಸಾವಿರಾರು ಜನರು ರಸ್ತೆಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಖಮೇನಿ ಅವರು ಹಿಂದೆ ಅಲಿಪುರಕ್ಕೆ ಭೇಟಿ ನೀಡಿದ್ದನ್ನು ನೆನೆದ ಗ್ರಾಮಸ್ಥರು, ಅವರ ಸಾವಿನಿಂದ ಕಂಗೆಟ್ಟಿದ್ದಾರೆ. ಗೌರವಾರ್ಥವಾಗಿ ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದ್ದು, ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಕಪ್ಪು ಪಟ್ಟಿ ಧರಿಸಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಪ್ಯಾಲೆಸ್ಟೈನ್ ಪರ ಧ್ವನಿಯಾಗಿದ್ದ ನಾಯಕನ ಅಂತ್ಯಕ್ಕೆ ಕಂಬನಿ ಮಿಡಿದಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments