ಕಲಬುರಗಿ : ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಈಚೆಗೆ ನಡೆದ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಸಂಘಟನೆಯ ಮುಕಂಡ ಚಕ್ರವರ್ತಿ ಸೂಲಿಬೆಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.

ಸೂಲಿಬೆಲೆ ಅವರು ಕಳೆದ ಹಲವು ವರ್ಷಗಳಿಂದ ಬಿಜೆಪಿ ವಿರೋಧಿ ನಾಯಕರನ್ನು ತಮ್ಮ ಭಾಷಣದಲ್ಲಿ ಅವಹೇಳನ ಮಾಡುತ್ತಾ ಬರುತ್ತಿದ್ದಾರೆ. ಕೋಮು ದ್ವೇಷದ ನೆಲೆಗಟ್ಟಿನಲ್ಲಿ ಕಾಂಗ್ರೆಸ್ ನಾಯಕರ ಬಗ್ಗೆ ಕೆಟ್ಟದಾಗಿ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ದೂರು ನೀಡಿದ್ದರು. ಅವರ ದೂರಿನ ಅಹ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೂಲಿಬೆಲೆ ವಿರುದ್ಧ ಕಲಂ 353, 338, 352, 342, 153 (ಬಿ), 259 (ಎ), 505 ಮತ್ತು 3(2) ಐಸಿಸಿ ಪ್ರಕರಣ ದಾಖಲಾಗಿದೆ.


