ಚಿಕ್ಕೋಡಿ : ಸರ್ಕಾರ ತಾರತಮ್ಯ ನೀತಿಯನ್ನು ಖಂಡಿಸಿ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಿದರು.
ರಮೇಶ್ ಜಾರಕಿಹೊಳಿ ಹಾಗೂ ಶ್ರೀಮಂತ ಪಾಟೀಲ್ ನೇತೃತ್ವದ ಪ್ರೊಟೆಸ್ಟ್ ನಡೆಸಲಾಯಿತು. ಕಾಂಗ್ರೆಸ್ ಶಾಸಕರಿಂದ ಹಾಗೂ ಬೆಂಬಲಿಗರಿಂದ ಸಾರ್ವಜನಿಕ ಮೇಲೆ ಅನ್ಯಾಯ ದಬ್ಬಾಳಿಕೆ ಆರೋಪ ಹಾಗೂ ಕಾಗವಾಡ ಕ್ಷೇತ್ರದಲ್ಲಿ ಭ್ರಷ್ಟಾಚಾರ, ಅಧಿಕಾರಿಗಳ ಅಂದಾ ದರ್ಬಾರ್ ಖಂಡಿಸಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಅವಧಿಯಲ್ಲಿ ಮಂಜೂರಾದ ಮನೆಗಳು ಕಾಂಗ್ರೆಸ್ ಕಾರ್ಯಕರ್ತರಿಗೆ ಹಂಚಿಕೆಯಾಗಿದೆ, ಶಾಸಕ ರಾಜು ಕಾಗೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.