Wednesday, June 25, 2025
28.6 C
Bengaluru
Google search engine
LIVE
ಮನೆರಾಜ್ಯಅಯೋಧ್ಯೆಗೆ ತೆರಳಿದ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ

ಅಯೋಧ್ಯೆಗೆ ತೆರಳಿದ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ

ಬೆಂಗಳೂರು: ನಾಳೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಷಣಗಣನೆ ಶುರುವಾಗಿದೆ. ಮಾಜಿ ಪ್ರಧಾನಿ ದೇವೇಗೌಡ್ರ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ. ಹಾಗಾಗಿ ದೇವೇಗೌಡ್ರ ಕುಟುಂಬ ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ತೆರಳಿದೆ.

ರಾಮ ಮಂದಿರದಲ್ಲಿ ನಾಳೆ ನಡೆಯಲಿರುವ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿಗಳಾದ ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡರು, ಅವರ ಧರ್ಮಪತ್ನಿ ಶ್ರೀಮತಿ ಚನ್ನಮ್ಮ ಅಮ್ಮನವರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಇಂದು ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು.

ಈ ಮುನ್ನ ಮಾತಾಡಿದ ದೇವೇಗೌಡ್ರು, ಅಯೋಧ್ಯೆಯಲ್ಲಿ ನಡೆಯೋ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕಾಶ್ಮೀರದ ಮುಸ್ಲಿಮರು ಹೂವು ಕಳಿಸಿದ್ದಾರೆ. ಪಶ್ಚಿಮ ಬಂಗಾಳದ ಜನ ಕೂಡ ಹೂವಿನ ಮಾಲೆ ಕಟ್ಟಿಕೊಟ್ಟಿದ್ದಾರೆ. ಅನೇಕ ರಾಜ್ಯಗಳಿಂದ ಅಯೋಧ್ಯೆಗೆ ವಿಶೇಷ ಉಡುಗೊರೆಗಳು ಬಂದಿವೆ. ಹಿಂದೂಗಳು ಬಿಡಿ, ಮುಸ್ಲಿಮರೇ ಹೂವು ಮಳೆ ಸುರಿಸುತ್ತಿದ್ದಾರೆ. ಎಲ್ಲರೂ ಎಲ್ಲವನ್ನೂ ಅರ್ಥ ಮಾಡಿಕೊಳ್ಳಬೇಕಿದೆ. ಯಾರಿಗೆ ಯಾರು ಪ್ರೇರಣೆ ಮಾಡಲ್ಲ ಎಂದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments