ರಾಜಕೀಯರಾಜ್ಯಸುದ್ದಿ

ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಿದ ಸಿದ್ದರಾಮಯ್ಯ, ಎಷ್ಟು ಗೊತ್ತಾ?

ಬೆಲೆ ಇಳಿಕೆಯಿಂದ ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ಡಿಸೆಂಬರ್ ತಿಂಗಳಾಂತ್ಯದಲ್ಲಿ ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಿಸಿ ಆದೇಶಿಸಿತ್ತು. ಆದರೆ, ಇದುವರೆಗೆ ಯಾವುದೇ ಘೋಷಣೆ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ಪ್ರತಿ ಕ್ವಿಂಟಾಲ್‌ ಕೊಬ್ಬರಿಗೆ 1500 ರೂಪಾಯಿ ಬೆಂಬಲ ಬೆಲೆ ನೀಡುವುದಾಗಿ ಹೇಳಿದ್ದಾರೆ.

ತುಮಕೂರಿ​ನ ಸಿದ್ದಗಂಗಾ ಮಠದ ಬಳಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಹೆಚ್ಚುವರಿಯಾಗಿ 1,500 ರೂಪಾಯಿ ನೀಡುವುದಾಗಿ ಹೇಳಿದ್ದಾರೆ. ಕುಣಿಗಲ್‌ನಲ್ಲಿ ಸ್ಟಡ್ ಫಾರಂನ ಟೌನ್‌ಶಿಪ್‌ ಮಾಡುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ ಮಾಡಲು ಸಲಹೆ ನೀಡಿದ್ದೇನೆ ಎಂದರು.

Comments (0)

Your email address will not be published. Required fields are marked *

Back to top button