ರಾಜಕೀಯರಾಜ್ಯಸುದ್ದಿ

ಸಿಎಂ ಕುರ್ಚಿ ಎಷ್ಟು ದಿನ ಇರುತ್ತೋ ಗೊತ್ತಿಲ್ಲ; ಸರ್ಕಾರಕ್ಕೆ ವಿಜಯೇಂದ್ರ ಖಡಕ್ ವಾರ್ನಿಂಗ್!

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ. ಸಿಎಂ ಅವರು ಒಂದು ಕಡೆ ಸೌಜನ್ಯ ತೋರುತ್ತಾ ಮತ್ತೊಂದು ಕಡೆ ಜನಸಾಮಾನ್ಯರಿಗೆ ತೊಂದರೆ ನೀಡುತ್ತಿದ್ದಾರೆ ಇದನ್ನು “ತೊಟ್ಟಿಲು ತೂಗಿ ಮಗು ಚಿವುಟುವ ಕೆಲಸ” ಎಂದು ಬಣ್ಣಿಸಿದ್ದಾರೆ. ರಾಜ್ಯದಲ್ಲಿ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ನೀವು ಇನ್ನು ಎಷ್ಟು ದಿನ ಮುಖ್ಯಮಂತ್ರಿ ಕುರ್ಚಿಯಲ್ಲಿ ಇರುತ್ತೀರೋ ಗೊತ್ತಿಲ್ಲ, ಇರುವಷ್ಟು ದಿನವಾದರೂ ಜನರಿಗೆ ನ್ಯಾಯ ಕೊಡಿ ಎಂದು ಸವಾಲು ಹಾಕಿದ್ದಾರೆ.

ಮುಂಬರುವ ಮಾರ್ಚ್ 6ರಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ಸರಣಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಿದೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ, ಆದರೆ ವಾಸ್ತವದಲ್ಲಿ ಯಾವುದೂ ಜಾರಿಯಾಗಿಲ್ಲ. ಇಂದು ರಾಜ್ಯದ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ವೈದ್ಯರು ಸೇರಿದಂತೆ ಎಲ್ಲಾ ವರ್ಗದ ಜನರು ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಯುವಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದು, ವಿದ್ಯಾರ್ಥಿಗಳಿಗೆ ನ್ಯಾಯ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಆಡಳಿತ ಸಂಪೂರ್ಣವಾಗಿ ಹಳಿ ತಪ್ಪಿದ್ದು, ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂಬುದು ವಿಜಯೇಂದ್ರ ಅವರ ಪ್ರಮುಖ ಆರೋಪವಾಗಿದೆ. ಇಂದು ಮತ್ತು ನಾಳೆಯಿಂದಲೇ ಸರ್ಕಾರದ ವಿರುದ್ಧ ವಿವಿಧ ಹಂತದ ಹೋರಾಟಗಳು ಆರಂಭವಾಗಲಿವೆ ಬಜೆಟ್ ಮಂಡನೆಯ ವೇಳೆಗೆ ಸರ್ಕಾರದ ವಿರುದ್ಧ ಜನಾಕ್ರೋಶ ಮುಗಿಲು ಮುಟ್ಟಲಿದ್ದು, ಜನರ ಸಂಕಷ್ಟಗಳಿಗೆ ಸ್ಪಂದಿಸದ ಈ ಸರ್ಕಾರಕ್ಕೆ ಪಾಠ ಕಲಿಸಲು ಬಿಜೆಪಿ ಸನ್ನದ್ಧವಾಗಿದೆ ಹೇಳಿಕೆ ನೀಡಿದ್ದಾರೆ.

Comments (0)

Your email address will not be published. Required fields are marked *

Back to top button