Top Newsರಾಜಕೀಯರಾಜ್ಯಸುದ್ದಿ

ಬಿಜೆಪಿ ಬ್ಯಾನರ್‌ನಲ್ಲಿ ವಿಜಯೇಂದ್ರ ಫೋಟೋ ಮಿಸ್; ತಪ್ಪಿನ ಹೊಣೆ ಹೊತ್ತ ಶಾಸಕ ಅರವಿಂದ ಬೆಲ್ಲದ್!

ಕರ್ನಾಟಕ ಬಿಜೆಪಿಯಲ್ಲಿ ಈಗ ‘ಬ್ಯಾನರ್ ರಾಜಕೀಯ’ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಪಕ್ಷದ ಕಾರ್ಯಕ್ರಮದ ಬ್ಯಾನರ್‌ನಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಫೋಟೋ ಕೈಬಿಟ್ಟ ವಿಚಾರ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್ ಪ್ರತಿಕ್ರಿಯೆ ನೀಡಿದ್ದು, ನಡೆದ ಪ್ರಮಾದಕ್ಕೆ ತಾವೇ ಹೊಣೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ಫೋಟೋ ಇಲ್ಲದ ವಿಚಾರವನ್ನು ಸ್ವತಃ ವಿಜಯೇಂದ್ರ ಅವರೇ ಬೆಲ್ಲದ್ ಅವರ ಗಮನಕ್ಕೆ ತಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಸಮಜಾಯಿಷಿ ನೀಡಿರುವ ಬೆಲ್ಲದ್, “ವಿದ್ಯಾರ್ಥಿಗಳ ಪ್ರತಿಭಟನೆಗೆ ಅನುಮತಿ ಸಿಗುವುದು ತಡವಾಯಿತು. ಕೊನೆ ಕ್ಷಣದಲ್ಲಿ ವಿದ್ಯಾರ್ಥಿಗಳೇ ಬ್ಯಾನರ್ ಸಿದ್ಧಪಡಿಸಿದ್ದರಿಂದ ಈ ತಪ್ಪು ನಡೆದಿದೆ. ಇದೊಂದು ಸಣ್ಣ ವಿಚಾರವಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ತಪ್ಪುಗಳು ಮರುಕಳಿಸದಂತೆ ಎಚ್ಚರ ವಹಿಸುತ್ತೇನೆ” ಎಂದು ಹೇಳಿದ್ದಾರೆ.

ಪಕ್ಷದ ಆಂತರಿಕ ವಲಯದಲ್ಲಿ ಈ ಫೋಟೋ ವಿವಾದ ಅಸಮಾಧಾನಕ್ಕೆ ಕಾರಣವಾಗಿರುವ ಬೆನ್ನಲ್ಲೇ ಬೆಲ್ಲದ್ ಅವರು ಬಹಿರಂಗವಾಗಿ ಮಿಸ್ಟೇಕ್ ಒಪ್ಪಿಕೊಂಡಿರುವುದು ಕುತೂಹಲ ಮೂಡಿಸಿದೆ. “ಇದೊಂದು ಮಿಸ್ಟೇಕ್ ಅಷ್ಟೇ, ಮುಂದೆ ಎಲ್ಲವೂ ಸರಿಯಾಗಲಿದೆ” ಎನ್ನುವ ಮೂಲಕ ವಿವಾದಕ್ಕೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ.

Comments (0)

Your email address will not be published. Required fields are marked *

Back to top button