#Exclusive NewsTop Newsರಾಜಕೀಯವಾಣಿಜ್ಯಹಣಕಾಸು
ದಾವಣಗೆರೆ ದಕ್ಷಿಣಕ್ಕೆ ಸಿಎಂ ಸಿದ್ದರಾಮಯ್ಯ ಬಂಪರ್; 100 ಕೋಟಿ ಅನುದಾನ ಘೋಷಣೆ!

ಬೆಂಗಳೂರು: ಶೀಘ್ರದಲ್ಲೇ ಎದುರಾಗಲಿರುವ ಉಪಚುನಾವಣೆಯ ಹಿನ್ನೆಲೆಯಲ್ಲಿ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರ್ಜರಿ ಕೊಡುಗೆ ನೀಡಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಬರೋಬ್ಬರಿ 100 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಘೋಷಿಸಲಾಗಿದೆ. ಈ ಮಹತ್ವದ ಘೋಷಣೆಯು ದಾವಣಗೆರೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆಗಳು, ಕುಡಿಯುವ ನೀರು, ಒಳಚರಂಡಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಈ ಹಣವನ್ನು ಮೀಸಲಿಡಲಾಗಿದೆ. ಉಪಚುನಾವಣೆ ಹತ್ತಿರವಿರುವ ಸಮಯದಲ್ಲಿ ಈ ಭಾರಿ ಮೊತ್ತದ ಅನುದಾನ ಘೋಷಿಸಿರುವುದು ಮತದಾರರನ್ನು ಸೆಳೆಯುವ ತಂತ್ರವೆಂದೇ ವಿಶ್ಲೇಷಿಸಲಾಗುತ್ತಿದೆ. ಬಜೆಟ್ ಮಂಡನೆ ವೇಳೆ ದಾವಣಗೆರೆ ದಕ್ಷಿಣ ಕ್ಷೇತ್ರದ ಬಗ್ಗೆ ವಿಶೇಷ ಪ್ರಸ್ತಾಪ ಮಾಡಿದ ಸಿಎಂ, ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.



