Monday, December 8, 2025
18.9 C
Bengaluru
Google search engine
LIVE
ಮನೆರಾಜಕೀಯನಾನು ಮಹಿಷ ದಸರಾ ವಿರೋಧಿ ; ಪ್ರತಾಪ್​ ಸಿಂಹ

ನಾನು ಮಹಿಷ ದಸರಾ ವಿರೋಧಿ ; ಪ್ರತಾಪ್​ ಸಿಂಹ

ಮೈಸೂರು : ಅಯೋಧ್ಯೆ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಶ್ರೀರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್​ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್​​ ಮಾಡಿ ಪೂಜೆಗೆ ಅವಕಾಶ ಕಲ್ಪಿಸದೇ ವಾಪಸ್​ ಕಳುಹಿಸಿದ ಘಟನೆ ಮೈಸೂರು ತಾಲೂಕು ಹಾರೋಹಳ್ಳಿಯಲ್ಲಿ ನಡೆದಿದೆ.

ಈ ಗಲಾಟೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಪ್ರತಾಪ್​ ಸಿಂಹ, ನಾನು ಈ ಕ್ಷಣಕ್ಕೂ ಮಹಿಷ ದಸರಾ ವಿರೋಧಿ. ಮಹಿಷಾ ದಸರಾ ವಿರೋಧ ಮಾಡಿದ್ದಕ್ಕೆ ಯಾರೋ ನಾಲ್ಕು ಜನ ಕಿಡಿಗೇಡಿಗಳು ಗಲಾಟೆ ಮಾಡಿದರು. ಕಾಂಗ್ರೆಸ್​ನ ಪುಡಾರಿಗಳಿಂದ ಗಲಾಟೆ ನಡೆದಿದೆ ಎಂದರು.

ಯಾರೋ ನಾಲ್ಕು ಜನ ಮಹಿಷನ ಭಕ್ತರಿದ್ದಾರೆ. ಚಾಮುಂಡಿ ತಾಯಿಯ ಭಕ್ತರು ಕೋಟ್ಯಾಂತರ ಇದ್ದಾರೆ. ನಾನು ಚಾಮುಂಡಿಯ ಭಕ್ತ‌. ನನ್ನನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್ ನವರಿಂದ ಸೋಲಿಸಲು ಸಾಧ್ಯವಿಲ್ಲ. ಈ ಕಾರಣಕ್ಕೆ ಇಂತಹ ಗಲಾಟೆಗಳು ಮುಂದೆನೋ ನಡೆಯುತ್ತೆ ಇದಕ್ಕೆಲ್ಲಾ ಹೆದರುವುದಿಲ್ಲ ಎಂದು ಕಾಂಗ್ರೆಸ್​ ವಿರುದ್ಧ ಸಂಸದ ಪ್ರತಾಪ್​ ಸಿಂಹ ವಾಗ್ದಾಳಿ ನಡೆಸಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments