Tuesday, June 24, 2025
26.6 C
Bengaluru
Google search engine
LIVE
ಮನೆUncategorizedಬಿಯರ್ ಪ್ರಿಯರಿಗೆ ಶಾಕ್ ನೀಡಲು ಮುಂದಾದ ಸರ್ಕಾರ.!

ಬಿಯರ್ ಪ್ರಿಯರಿಗೆ ಶಾಕ್ ನೀಡಲು ಮುಂದಾದ ಸರ್ಕಾರ.!

ಬೆಂಗಳೂರು:ಕರ್ನಾಟಕ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಮತ್ತೊಮ್ಮೆ ಹೆಚ್ಚಿಸಲು ಮುಂದಾಗಿದೆ. ಒಂದು ವೇಳೆ ಇದು ನಿಜವಾದಲ್ಲಿ ಪ್ರತಿ 650 ಮಿಲಿ ಬಿಯರ್ ಬಾಟಲಿಗೆ 8-10 ರೂ. ವರೆಗೆ ದರ ಹೆಚ್ಚಾಗಲಿದೆ. ‘ಕರ್ನಾಟಕ ಅಬಕಾರಿ ನಿಯಮಗಳು, 1968’ಕ್ಕೆ ತಿದ್ದುಪಡಿ ಮಾಡಲು ಕರಡು ಅಧಿಸೂಚನೆ ರೂಪಿಸಲಾಗಿದ್ದು, ಇದರಲ್ಲಿ ದರ ಹೆಚ್ಚಳವನ್ನು ಪ್ರಸ್ತಾಪಿಸಲಾಗಿದೆ. ದರ ಹೆಚ್ಚಳಕ್ಕೆ ಅವಕಾಶ ನೀಡುವ ಹೊಸ ನಿಯಮಗಳು ಈ ತಿಂಗಳ ಕೊನೆಯಲ್ಲಿ ಅಥವಾ ಫೆಬ್ರವರಿ ಆರಂಭದಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿವೆ.

ಬಿಯರ್ ಮಾರಾಟದಲ್ಲಿ ದೊಡ್ಡ ಮಟ್ಟದ ಬೆಳವಣಿಗೆ ಕಂಡುಬಂದಿರುವುದರಿಂದ ಆ ಮೂಲದಿಂದ ಹೆಚ್ಚು ಆದಾಯ ಸಂಗ್ರಹಿಸುವ ನಿಟ್ಟಿನಲ್ಲಿ ಸರ್ಕಾರವು ಸುಂಕವನ್ನು ಹೆಚ್ಚಿಸುವತ್ತ ಮನ ಮಾಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದೆ.ಕಾಂಗ್ರೆಸ್ ಸರ್ಕಾರದ ಐದು ಉಚಿತ ಗ್ಯಾರಂಟಿಗಳಿಗೆ ಹಣ ಹೊಂದಿಸುವುದಕ್ಕಾಗಿ ಈ ಕ್ರಮಕ್ಕೆ ಸರ್ಕಾರ ಮುಂದಾಗಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.ಬಿಯರ್ ಮಾರಾಟದಲ್ಲಿ ದೊಡ್ಡ ಮಟ್ಟದ ಬೆಳವಣಿಗೆ ಕಂಡುಬಂದಿರುವುದರಿಂದ ಆ ಮೂಲದಿಂದ ಹೆಚ್ಚು ಆದಾಯ ಸಂಗ್ರಹಿಸುವ ನಿಟ್ಟಿನಲ್ಲಿ ಸರ್ಕಾರವು ಸುಂಕವನ್ನು ಹೆಚ್ಚಿಸುವತ್ತ ಮನ ಮಾಡಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments