ಕ್ರಿಕೆಟ್ಮನರಂಜನೆ

ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಮಹತ್ವದ ನಿರ್ಧಾರ

2023ರ ವಿಶ್ವಕಪ್ ಸೋಲಿನ ನಂತರ ಟೀಂ ಇಂಡಿಯಾದ ಮುಖ್ಯ ಕೋಚ್ ಬದಲಾಗುತ್ತಾರೋ ಇಲ್ಲವೋ ಎಂಬ ಪ್ರಶ್ನೆಗೆ ಬಿಸಿಸಿಐ ಇದೀಗ ಉತ್ತರ ನೀಡಿದೆ. ಬುಧವಾರ ಮಹತ್ವದ ಘೋಷಣೆ ಮಾಡಿರುವ ಬಿಸಿಸಿಐ, ರಾಹುಲ್ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಆಗಿ ಉಳಿಸಿಕೊಂಡಿದೆ.

ವಾಸ್ತವವಾಗಿ ವಿಶ್ವಕಪ್ ಫೈನಲ್ ನಂತರ ರಾಹುಲ್ ದ್ರಾವಿಡ್ ಅವರ ಒಪ್ಪಂದವು ಕೊನೆಗೊಂಡಿತ್ತು. ಅಂದಿನಿಂದ ರಾಹುಲ್ ದ್ರಾವಿಡ್ ಬದಲಿಗೆ ವಿವಿಎಸ್ ಲಕ್ಷ್ಮಣ್ ಅವರನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಿಸಲಾಗುತ್ತದೆ ಎಂಬ ಊಹಾಪೋಹಗಳು ಸೃಷ್ಟಿಯಾಗಿದ್ದವು. ಆದರೆ ಆ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ, ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ಮುಂದುವರೆಸಿದೆ.

Comments (0)

Your email address will not be published. Required fields are marked *

Back to top button