ರಾಜಕೀಯರಾಜ್ಯಶಿಕ್ಷಣಸುದ್ದಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಎಂ ಹಾಗೂ ಸಚಿವರಿಂದ ಶುಭ ಹಾರೈಕೆ ..!

ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭವಾಗಲಿದೆ. ರಾಜ್ಯದ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಶುಭಾಶಯ ಕೋರಿದ್ದಾರೆ.

ಪ್ರಸ್ತುತ ಸಾಲಿನಲ್ಲಿ 8,65,968 ಮಕ್ಕಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಕಳೆದ ಕೆಲ ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದೆ. ಪರೀಕ್ಷೆಗಳು ಮೂರು ಹಂತದಲ್ಲಿ ನಡೆಯುತ್ತಿದ್ದು, ವಿದ್ಯಾರ್ಥಿಗಳು ಮೊದಲ ಹಂತದಲ್ಲಿ ಅನುತ್ತೀರ್ಣರಾದರೂ ಎರಡನೇ ಮತ್ತು ಮೂರನೇ ಹಂತಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ಸಿಎಂ ವಿದ್ಯಾರ್ಥಿಗಳಿಗೆ ಆತಂಕವಿಲ್ಲದೆ ಧೈರ್ಯವಾಗಿ ಪರೀಕ್ಷೆ ಬರೆಯುವಂತೆ ತಿಳಿಸಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೂಡ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿ, ಹಿಂದಿನ ಕಾಲದಲ್ಲಿ ಮಕ್ಕಳು ಒತ್ತಡದೊಂದಿಗೆ ಪರೀಕ್ಷೆ ಹಾಜರಾಗುತ್ತಿದ್ದರು ಎಂದು ತಿಳಿಸಿದ್ದಾರೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕೂಡ ವಿದ್ಯಾರ್ಥಿಗಳಿಗೆ ಶುಭಕೋರಿದ್ದು, ಪೋಷಕರು ಮಕ್ಕಳ ಮೇಲೆ ಮಾನಸಿಕ ಒತ್ತಡವಿಡಬಾರದು ಎಂದು ಸೂಚಿಸಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಬಗ್ಗೆ ಸುದ್ದಿಗಳು ಬಂದಿದ್ದು, ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಎಚ್ಚರಿಕೆ ನೀಡುವಂತೆ ತಿಳಿಸಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳು ಆತಂಕವಿಲ್ಲದೆ ಪರೀಕ್ಷೆಗೆ ಹಾಜರಾಗುವಂತೆ ಮತ್ತು ಧೈರ್ಯವಾಗಿ ಪರೀಕ್ಷೆ ಬರೆಯುವಂತೆ ಸರ್ಕಾರಿ ಅಧಿಕಾರಿಗಳು ವಿನಂತಿ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button