BELAGAVIಕ್ರೈಂ ಸ್ಟೋರಿಸುದ್ದಿ

15 ದಿನದ ಹಸುಗೂಸಿಗೆ ವಿಷ ನೀಡಿ ಕೊಲೆ? ತಂದೆಯ ಮೇಲೆ ಗಂಭೀರ ಆರೋಪ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಉಕ್ಕಡ ಗ್ರಾಮದಲ್ಲಿ ಮಾನವೀಯತೆಯನ್ನು ಬೆಚ್ಚಿಬೀಳಿಸುವಂತಹ ಘಟನೆ ನಡೆದಿದೆ. 15 ದಿನಗಳ ಹಿಂದಷ್ಟೇ ಜನಿಸಿದ್ದ ಹಸುಗೂಸು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮಗುವಿನ ತಂದೆಯ ಮೇಲೆಯೇ ಕೊಲೆ ಆರೋಪ ಕೇಳಿಬಂದಿದೆ. ಈ ಘಟನೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಮಗುವಿನ ತಾಯಿ, ತನ್ನ ಪತಿಯ ಮೇಲೆಯೇ ಗಂಭೀರ ಆರೋಪ ಮಾಡಿದ್ದಾರೆ.

ಹೆರಿಗೆಯಾದ ಹಿನ್ನೆಲೆಯಲ್ಲಿ ತಾಯಿ ತನ್ನ ತವರು ಮನೆಯಲ್ಲಿ ಇದ್ದರು. ಮಗುವನ್ನು ನೋಡಲು ತಂದೆ ಮನೆಗೆ ಬಂದಿದ್ದಾನೆ. ಈ ವೇಳೆ ಅವನು ಒಂದು ಸಣ್ಣ ಟ್ಯೂಬ್ ಹಿಡಿದುಕೊಂಡು ಬಂದಿದ್ದಾನೆ ಎನ್ನಲಾಗಿದೆ.

ತಾಯಿಯ ಪ್ರಕಾರ, ತಂದೆ ಬಂದ ಕೆಲವೇ ಗಂಟೆಗಳಲ್ಲೇ ಮಗು ಅಸ್ವಸ್ಥಗೊಂಡು ಸಾವನ್ನಪ್ಪಿದೆ. ಇದರಿಂದ ತಂದೆಯೇ ಮಗುವಿಗೆ ವಿಷ ಪ್ರಾಶನ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಬೆಳಕಿಗೆ ಬಂದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ಸಾವಿನ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ಮಾಡಲಾಗುತ್ತಿದೆ.

Comments (0)

Your email address will not be published. Required fields are marked *

Back to top button