ದೇಶ/ವಿದೇಶರಾಜಕೀಯಸುದ್ದಿ

ಇಸ್ರೇಲ್ ವಿರುದ್ಧ ಟ್ರಂಪ್ ಆಕ್ರೋಶ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರಿಗೆ ಇದು ದೊಡ್ಡ ರಾಜಕೀಯ ಶಾಕ್ ಆಗಬಹುದು ಎಂಬ ವಿಶ್ಲೇಷಣೆ ವ್ಯಕ್ತವಾಗುತ್ತಿದೆ.

ಇರಾನ್‌ನ ಸೌತ್ ಪಾರ್ಸ್ ತೈಲ ಘಟಕದ ಮೇಲಿನ ದಾಳಿಗೆ ಟ್ರಂಪ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, “ಈ ದಾಳಿ ಬಗ್ಗೆ ಅಮೆರಿಕಕ್ಕೆ ಯಾವುದೇ ಮಾಹಿತಿ ಇರಲಿಲ್ಲ” ಎಂದು ಹೇಳಿದ್ದಾರೆ. ಇಸ್ರೇಲ್ ತನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಪಕ್ಷೀಯವಾಗಿ ನಡೆದುಕೊಂಡಿದೆ ಎಂಬ ಅಸಮಾಧಾನವನ್ನೂ ಹೊರಹಾಕಿದ್ದಾರೆ.

ಸೌತ್ ಪಾರ್ಸ್ ಮೇಲೆ ನಡೆದ ದಾಳಿಯ ನಂತರ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿದ್ದು, ಇರಾನ್ ಕತಾರ್ ಮೇಲೆ ಪ್ರತಿದಾಳಿ ನಡೆಸಿದೆ ಎನ್ನಲಾಗುತ್ತಿದೆ. ಯುದ್ಧದಲ್ಲಿ ಭಾಗಿಯಾಗಿರದಿದ್ದರೂ ಕತಾರ್ ಈ ದಾಳಿಗೆ ಗುರಿಯಾಗಿರುವುದು ಅಚ್ಚರಿಯ ಸಂಗತಿಯಾಗಿದೆ.

ವಿಶ್ವದ ಪ್ರಮುಖ ಇಂಧನ ಕೇಂದ್ರಗಳಲ್ಲಿ ಒಂದಾದ ರಾಸ್ ಲಫಾನ್ ತೈಲ ಘಟಕ ದಾಳಿಯಿಂದ ಹಾನಿಗೊಳಗಾದ ಬಗ್ಗೆ ವರದಿಗಳು ಸೂಚಿಸುತ್ತಿವೆ. ಇದು ಜಾಗತಿಕ ತೈಲ ಸರಬರಾಜಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಈ ಬೆಳವಣಿಗೆಗಳು ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚಿಸಿದ್ದು, ತೈಲ ಕೊರತೆ ಉಂಟಾಗುವ ಭೀತಿ ಎದುರಾಗಿದೆ. ಮಧ್ಯಪ್ರಾಚ್ಯದ ಈ ಉದ್ವಿಗ್ನ ಪರಿಸ್ಥಿತಿ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Comments (0)

Your email address will not be published. Required fields are marked *

Back to top button