ರಾಜಕೀಯ

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿರಾಯಾಸ; ಸಚಿವ ವಿ. ಸೋಮಣ್ಣ ಭರವಸೆ!

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಲಿದ್ದಾರೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ಸಂಸದರ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದ ದುರಾಡಳಿತ ಮತ್ತು ಅರಾಜಕತೆಯಿಂದ ಜನಸಾಮಾನ್ಯರು ಅನುಭವಿಸುತ್ತಿರುವ ನೋವಿಗೆ ಈ ಚುನಾವಣೆ ಉತ್ತರ ನೀಡಲಿದೆ. ಪ್ರಜ್ಞಾವಂತ ಮತದಾರರು ಈ ಸದಾವಕಾಶವನ್ನು ಬಳಸಿಕೊಂಡು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿದರು.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಸನ್ನಿವೇಶವು ಭಾರತದ ಮೇಲೆ ಯಾವುದೇ ಗಂಭೀರ ಪರಿಣಾಮ ಬೀರದಂತೆ ಪ್ರಧಾನಿ ನರೇಂದ್ರ ಮೋದಿ ಅವರು ದೂರದೃಷ್ಟಿಯ ಕ್ರಮಗಳನ್ನು ಕೈಗೊಂಡಿದ್ದಾರೆ . ಪ್ರಪಂಚದ ವಿವಿಧ ಭಾಗಗಳಲ್ಲಿ ಅನಿಶ್ಚಿತತೆ ಇದ್ದರೂ ಭಾರತದ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಗ್ಯಾಸ್ ಸಿಲಿಂಡರ್‌ಗಳ ಕೊರತೆಯಾಗದಂತೆ ಈಗಾಗಲೇ ಆಹಾರ ಸಚಿವರು ವಿತರಕರಿಗೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದರು.

ಇಂಧನ ಪೂರೈಕೆಯ ಬಗ್ಗೆ ಮಾಹಿತಿ ನೀಡಿದ ಸಚಿವರು, ಇನ್ನೆರಡು ದಿನಗಳಲ್ಲಿ ಎರಡು ಬೃಹತ್ ಹಡಗುಗಳ ಮೂಲಕ ದೇಶಕ್ಕೆ ಗ್ಯಾಸ್ ಪೂರೈಕೆಯಾಗಲಿದೆ. ಮುಂದಿನ 3-4 ದಿನಗಳಲ್ಲಿ ಯುದ್ಧದ ವಾತಾವರಣವು ತಿಳಿಯಾಗುವ ಲಕ್ಷಣಗಳಿದ್ದು, ಪರಿಸ್ಥಿತಿ ಸಂಪೂರ್ಣ ಹತೋಟಿಗೆ ಬರಲಿದೆ. ಅಧಿಕಾರಿಗಳು ಸಹ ಜನಸಾಮಾನ್ಯರ ಸಂಕಷ್ಟಗಳನ್ನು ಅರ್ಥೈಸಿಕೊಂಡು ಕೆಲಸ ಮಾಡಬೇಕು ಸಲಹೆ ನೀಡಿದರು.

Comments (0)

Your email address will not be published. Required fields are marked *

Back to top button