DAVANAGEREರಾಜಕೀಯಸುದ್ದಿಹಣಕಾಸು

ಬಿವೈ ವಿಜಯೇಂದ್ರ ಗಂಭೀರ ಆರೋಪ: ದಾವಣಗೆರೆಗೆ ಗೋಣಿಚೀಲದಲ್ಲಿ ಹಣ ತರುತ್ತಾರೆ

ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳ ಹಿನ್ನೆಲೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. ಈ ಮಧ್ಯೆ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ವಿಜಯೇಂದ್ರ, ದಾವಣಗೆರೆಯಲ್ಲಿ ಸೂಟ್‌ಕೇಸ್‌ನಲ್ಲಿ ಹಣ ತರುವುದಿಲ್ಲ, ಸಚಿವರೊಬ್ಬರು ಗೋಣಿಚೀಲದಲ್ಲಿ ಹಣ ತಂದು ಕೂರುತ್ತಾರೆ ಎಂದು ಆರೋಪಿಸಿದರು. ಅಲ್ಲಿನ ರಾಜಕೀಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ನನಗೆ ತಿಳಿದಿದೆ ಎಂದು ಹೇಳಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
‘ರಾಜ್ಯದ ಜನ ಕಾಂಗ್ರೆಸ್ ಸರ್ಕಾರದಿಂದ ಬೇಸತ್ತಿದ್ದಾರೆ. ಇದು ಬಡವರು ಮತ್ತು ದೀನದಲಿತರ ವಿರೋಧಿ ಸರ್ಕಾರ’ ಎಂದು ಅವರು ಆರೋಪಿಸಿದರು. ಸದ್ಯದ ರಾಜಕೀಯ ವಾತಾವರಣ ನೋಡಿದರೆ ಬಿಜೆಪಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಈ ಹಿಂದೆ ಸಿರಾ ಮತ್ತು ಕೆಆರ್ ಪೇಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕುತಂತ್ರ ಮಾಡಿತ್ತು ಎಂದು ಆರೋಪಿಸಿದ ಅವರು, ಮತದಾನ ಕೊನೆಯ ದಿನದವರೆಗೆ ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡಬೇಕು.

Comments (0)

Your email address will not be published. Required fields are marked *

Back to top button