ಕ್ರೈಂ ಸ್ಟೋರಿಜಿಲ್ಲೆಸುದ್ದಿಹಣಕಾಸು

ಆನ್‌ಲೈನ್ ಟ್ರೇಡಿಂಗ್ ಹೆಸರಲ್ಲಿ ಭರ್ಜರಿ ವಂಚನೆ…!

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶಿವಪುರ ಗ್ರಾಮದಲ್ಲಿ ಫೇಸ್‌ಬುಕ್ ಜಾಹೀರಾತು ನಂಬಿದ ವ್ಯಕ್ತಿಯೊಬ್ಬರು ಬರೋಬ್ಬರಿ 1.28 ಕೋಟಿ ರೂಪಾಯಿ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ಕಲ್ಲೇಗೌಡ ಎಂಬುವವರು ಫೇಸ್‌ಬುಕ್‌ನಲ್ಲಿ ‘FYERS’ ಎಂಬ ಆನ್‌ಲೈನ್ ಟ್ರೇಡಿಂಗ್ ಹೂಡಿಕೆಯ ಜಾಹೀರಾತು ನೋಡಿ, ಹೆಚ್ಚಿನ ಲಾಭದ ಆಸೆಗೆ ಬಿದ್ದು ವಂಚಕರ ಜಾಲಕ್ಕೆ ಸಿಲುಕಿದ್ದಾರೆ. ವಂಚಕರು ಇವರನ್ನು ವಾಟ್ಸಾಪ್ ಗ್ರೂಪ್‌ಗೆ ಸೇರಿಸಿಕೊಂಡು, ಹಂತ ಹಂತವಾಗಿ ಒಟ್ಟು 1,28,10,000 ರೂಪಾಯಿಗಳನ್ನು ಹೂಡಿಕೆ ಮಾಡಿಸಿಕೊಂಡಿದ್ದಾರೆ. ತಾವು ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಹೋದಾಗ ವಂಚನೆ ನಡೆದಿರುವುದು ಬೆಳಕಿಗೆ ಬಂದಿದ್ದು, ಪ್ರಸ್ತುತ ಚಿಕ್ಕಮಗಳೂರಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments (0)

Your email address will not be published. Required fields are marked *

Back to top button