
ಯಶ್ ಅವರ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ದಿನಾಂಕ ಬದಲಾದ ಬೆನ್ನಲ್ಲೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಅದಲು-ಬದಲು ಶುರುವಾಗಿದೆ. ಈ ಬೆಳವಣಿಗೆಯಿಂದಾಗಿ ರಾಮ್ ಚರಣ್ ಅವರ ‘ಪೆದ್ದಿ’ ಮತ್ತು ಧ್ರುವ ಸರ್ಜಾ ಅವರ ‘KD: ದಿ ಡೆವಿಲ್’ ಚಿತ್ರಗಳ ನಡುವೆ ಬಾಕ್ಸ್ ಆಫೀಸ್ ಕದನ ಏರ್ಪಡುವುದು ಬಹುತೇಕ ಖಚಿತವಾಗಿದೆ. ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾ ಏಪ್ರಿಲ್ 30ರಂದು ತೆರೆಗೆ ಬರುತ್ತಿದೆ. ಆಶ್ಚರ್ಯವೆಂದರೆ, ಸ್ಯಾಂಡಲ್‌ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘KD: ದಿ ಡೆವಿಲ್’ ಕೂಡ ಇದೇ ದಿನ ಅಂದರೆ ಏಪ್ರಿಲ್ 30ರಂದೇ ಬಿಡುಗಡೆಯಾಗಲಿದೆ. ಈ ಎರಡೂ ಸಿನಿಮಾಗಳು ಏಕಕಾಲಕ್ಕೆ ರಿಲೀಸ್ ಆಗುತ್ತಿರುವುದರಿಂದ ದಕ್ಷಿಣ ಭಾರತದ ಬಾಕ್ಸ್ ಆಫೀಸ್‌ನಲ್ಲಿ ಭಾರಿ ಪೈಪೋಟಿ ನಿರೀಕ್ಷಿಸಲಾಗಿದೆ.
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ಕ್ಕೆ ಬರಬೇಕಿತ್ತು, ಆದರೆ ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಜೂನ್ 4ಕ್ಕೆ ಮುಂದೂಡಲ್ಪಟ್ಟಿದೆ. ಈ ಒಂದು ಬದಲಾವಣೆ ಚೈನ್ ರಿಯಾಕ್ಷನ್‌ನಂತೆ ಇತರ ಸಿನಿಮಾಗಳ ಮೇಲೆ ಪ್ರಭಾವ ಬೀರಿದೆ.




