ಜಿಲ್ಲೆರಾಜ್ಯಸುದ್ದಿ

ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ ಕೆಎಸ್‌ಆರ್‌ಟಿಸಿ..!

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಟೋಲ್‌ಗೇಟ್ ಬಳಿ ಪ್ರೀತಿಯ ವೈಫಲ್ಯದಿಂದ ಮನನೊಂದ ಯುವಕನೊಬ್ಬ KSRTC ಬಸ್ಸಿಗೆ ಬೈಕ್ ಡಿಕ್ಕಿ ಹೊಡೆಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಸಿಂದಗಿ ಪಟ್ಟಣದ 19 ವರ್ಷದ ಅಭಿಷೇಕ ಎಂದು ಗುರುತಿಸಲಾಗಿದ್ದು, ಈತ ತನ್ನ ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ವೇಗವಾಗಿ ಬಂದು ಕೆಎಸ್‌ಆರ್‌ಟಿಸಿ ಬಸ್ಸಿಗೆ ಗುದ್ದಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಮತ್ತು ಬಸ್ ಎರಡಕ್ಕೂ ಬೆಂಕಿ ಹೊತ್ತಿಕೊಂಡಿದ್ದು, ಯುವಕ ಸ್ಥಳದಲ್ಲೇ ಸಜೀವ ದಹನವಾಗಿದ್ದಾನೆ.

ಅದೃಷ್ಟವಶಾತ್ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಕೆಳಗಿಳಿದಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಅಭಿಷೇಕ ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿದ್ದು, ತನ್ನ ಸಾವಿಗೆ ಪ್ರೀತಿಯ ವೈಫಲ್ಯವೇ ಕಾರಣ ಎಂದು ಮೂವರ ಹೆಸರನ್ನು ಉಲ್ಲೇಖಿಸಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Comments (0)

Your email address will not be published. Required fields are marked *

Back to top button