ರಾಜ್ಯಸುದ್ದಿ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರ ಪಾದಯಾತ್ರೆ

ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು 150 ಕಿಲೋಮೀಟರ್ ಪಾದಯಾತ್ರೆ ನಡೆಸಿದರು.

ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಮಲೆ ಮಹದೇಶ್ವರ ಬೆಟ್ಟದಿಂದ ಪಾದಯಾತ್ರೆ ಹೊರಟಿರುವ ನೂರಾರು ರೈತರು ಹಾಗು ಹೋರಾಟಗಾರರು, ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕು, ರೈತರ ಬೆಳೆಗೆ ಬೆಂಬಲ ಬೆಲೆ ನೀಡಬೇಕು, ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ಹತ್ತು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಲಿದ್ದಾರೆ.

ಜನವರಿ26ರಂದು ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗಿಯಾಗಲಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರನ್ನು ಭೇಟಿ ಮಾಡಲಿರುವ ಪಾದಯಾತ್ರಿಗಳು ತಮ್ಮ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸುವಂತೆ ಆಗ್ರಹಸಲಿದ್ದಾರೆ.

Comments (0)

Your email address will not be published. Required fields are marked *

Back to top button