ಕ್ರೈಂ ಸ್ಟೋರಿದೇಶ/ವಿದೇಶಸುದ್ದಿ

ಕಟಕ್ ಹೈಕೋರ್ಟ್ ಆವರಣದಲ್ಲಿ ಹೈಡ್ರಾಮಾ: ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ..!

ಒಡಿಶಾ: ಕಟಕ್‌ನಲ್ಲಿರುವ ಹೈಕೋರ್ಟ್ ಆವರಣದಲ್ಲಿ ಇಂದು ಮಧ್ಯಾಹ್ನ ಮಹಿಳೆಯೊಬ್ಬಳು ವಾಹನಗಳಿಗೆ ಬೆಂಕಿ ಹಚ್ಚಿದ ದಾರುಣ ಮತ್ತು ವಿಲಕ್ಷಣ ಘಟನೆ ನಡೆದಿದೆ. ಹೈಕೋರ್ಟ್ ಎದುರು ನಿಲ್ಲಿಸಲಾಗಿದ್ದ ವಾಹನಗಳಿಗೆ ಮಿನಾತಿ ಸಾಹು ಎಂಬ ಮಹಿಳೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಬೆಂಕಿಯ ಕೆನ್ನಾಲಿಗೆಗೆ ಮೊದಲು ಎರಡು ಬೈಕ್‌ಗಳು ಆಹುತಿಯಾಗಿದ್ದು, ನಂತರ ಪಕ್ಕದಲ್ಲಿದ್ದ ಕಾರಿಗೂ ಬೆಂಕಿ ವ್ಯಾಪಿಸಿದೆ.

ಘಟನೆ ನಡೆದ ಕೂಡಲೇ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಿದ್ದು, ಆಕೆ ನೀಡಿದ ಹೇಳಿಕೆ ಎಲ್ಲರನ್ನೂ ಅಚ್ಚರಿಗೊಳಿಸಿದೆ. ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆಯಲು ತಾನು ಈ ಕೃತ್ಯ ಎಸಗಿರುವುದಾಗಿ ಆಕೆ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾಳೆ. ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಮಿನಾತಿ ಸಾಹು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾಳೆ ಎಂದು ಹೇಳಲಾಗುತ್ತಿದೆ. ಸದ್ಯ ಪೊಲೀಸರು ಆಕೆಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ನ್ಯಾಯಾಲಯದಂತಹ ಸೂಕ್ಷ್ಮ ಪ್ರದೇಶದಲ್ಲಿ ಇಂತಹ ಘಟನೆ ನಡೆದಿರುವುದು ಭದ್ರತಾ ಲೋಪದ ಬಗ್ಗೆಯೂ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಘಟನೆಯಿಂದ ಹೈಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Comments (0)

Your email address will not be published. Required fields are marked *

Back to top button