Freedom TV

ಡಿಕೆ ಶಿವಕುಮಾರ್​ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ; ಮೇಲ್ಮನವಿ ವಾಪಸ್​ಗೆ ಅನುಮತಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಾಪಸ್ ಪಡೆಯಲು ಡಿಕೆ ಶಿವಕುಮಾರ್ ಅವರಿಗೆ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಡಿ.ಕೆ ಶಿವಕುಮಾರ್​ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದಂತಾಗಿದೆ.


ಸಿಬಿಐ ತನಿಖೆಗೆ ಅನುಮತಿ ನೀಡಿ ಹೊರಡಿಸಿದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಡಿ.ಕೆ ಶಿವಕುಮಾರ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಏಕ ಸದಸ್ಯ ಪೀಠ, ಅರ್ಜಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಡಿ.ಕೆ ಶಿವಕುಮಾರ್, ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಿಜೆ ಪ್ರಸನ್ನ, ಬಿ ವರಾಳೆ ಮತ್ತು ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಮೇಲ್ಮನವಿ ಹಿಂಪಡೆಯಲು ಅರ್ಜಿದಾರರಿಗೆ ಅವಕಾಶವಿದೆ ಎಂದು ಹೇಳಿ ಗುರುದೇವ್ ಸಿಂಗ್ ಮತ್ತು ಪಂಜಾಬ್ ಸರ್ಕಾರದ ಪ್ರಕರಣವನ್ನು ಉಲ್ಲೇಖಿಸಿತು. ಪ್ರಕರಣದ ಅರ್ಹತೆ ಬಗ್ಗೆ ಯಾವುದೇ ತೀರ್ಮಾನ ನೀಡುತ್ತಿಲ್ಲ. ಸಂಪುಟದ ನಿರ್ಧಾರವನ್ನು ಸಿಬಿಐ ಸೇರಿದಂತೆ ಯಾರು ಬೇಕಾದರೂ ಪ್ರಶ್ನಿಸಬಹುದು. ನಂತರ ಅರ್ಜಿಯನ್ನು ಪರಿಗಣಿಸಿ ಮುಂದುವರೆಯಬೇಕಾ ಬೇಡವಾ ಅಂತ ನಿರ್ಧಾರ ಮಾಡಲಾಗುತ್ತದೆ ಎಂದು ಪೀಠ ಹೇಳಿದೆ.

Comments (0)

Your email address will not be published. Required fields are marked *

Back to top button