ಕ್ರೈಂ ಸ್ಟೋರಿಸಿನಿಮಾಸುದ್ದಿ

ನಟಿ ಸುಭಾಷಿಣಿ ಆತ್ಮಹತ್ಯೆ: ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾದ ಸಾಸ್ವಿಬಾಲಾ!

ಚೆನ್ನೈ: ತಮಿಳು ಧಾರಾವಾಹಿ ಮತ್ತು ಚಲನಚಿತ್ರಗಳಲ್ಲಿ ಪೋಷಕ ನಟಿಯಾಗಿ ಗುರುತಿಸಿಕೊಂಡಿದ್ದ ನಟಿ ಸುಭಾಷಿಣಿ (ಸಾಸ್ವಿಬಾಲಾ) ಅವರು ಚೆನ್ನೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಮೂಲತಃ ಶ್ರೀಲಂಕಾದವರಾದ ಇವರು, 2024ರಲ್ಲಿ ಬೆಂಗಳೂರು ಮೂಲದ ಬಿಪಿನ್ ಚಂದ್ರನ್ ಅವರನ್ನು ವಿವಾಹವಾಗಿ ಅಲ್ಲಿಯೇ ನೆಲೆಸಿದ್ದರು. ಇತ್ತೀಚೆಗೆ ಸಿನಿಮಾ ಚಿತ್ರೀಕರಣದ ಉದ್ದೇಶಕ್ಕಾಗಿ ಚೆನ್ನೈನ ಪೋರೂರು ಸಮೀಪದ ಅಯ್ಯಪ್ಪಂತಂಗಲ್‌ನಲ್ಲಿ ಬಾಡಿಗೆ ಅಪಾರ್ಟ್‌ಮೆಂಟ್ ಪಡೆದಿದ್ದ ಅವರು, ಏಪ್ರಿಲ್ 5ರ ರಾತ್ರಿ ಈ ತೀವ್ರ ನಿರ್ಧಾರ ಕೈಗೊಂಡಿದ್ದಾರೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಸುಭಾಷಿಣಿ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತಮ್ಮ ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದರು. ಈ ಸಂಭಾಷಣೆಯ ವೇಳೆ ದಂಪತಿಗಳ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಿಡಿಯೋ ಕಾಲ್ ಚಾಲನೆಯಲ್ಲಿರುವಾಗಲೇ ಅವರು ನೇಣಿಗೆ ಶರಣಾಗಿದ್ದಾರೆ. ಇದನ್ನು ಕಂಡು ದಿಕ್ಕೇತೋಚದಂತಾದ ಪತಿ ಕೂಡಲೇ ಅಪಾರ್ಟ್‌ಮೆಂಟ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೋರೂರು ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಸಹ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಈ ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಯುವ ನಟಿಯೊಬ್ಬರು ವೃತ್ತಿಜೀವನದಲ್ಲಿ ಸಕ್ರಿಯರಾಗಿರುವಾಗಲೇ ಹೀಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಪ್ರಾಣ ಕಳೆದುಕೊಂಡಿರುವುದು ಚಿತ್ರರಂಗದಲ್ಲಿ ತೀವ್ರ ವಿಷಾದ ಮೂಡಿಸಿದೆ.

Comments (0)

Your email address will not be published. Required fields are marked *

Back to top button