ಮಕ್ಕಳಿಗೆ ಮೃತ್ಯುಕೂಪವಾದ ಕೃಷಿಹೊಂಡಗಳು
#KolarNews #Bangarapet #Tragedy #FarmPondAccident #SafetyFirst #KarnatakaNews #ChildSafety #Heartbreaking #PrecautionaryMeasures

ಇಬ್ಬರು ಮಕ್ಕಳು ಬಲಿ …


ಕೋಲಾರ: ಆಟವಾಡಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬೊಡೇನಹಳ್ಳಿಯಲ್ಲಿ ಘಟನೆ ನಡೆದಿದ್ದು, ವರದರಾಜು ಹಾಗೂ ಶ್ಯಾಮಲ ದಂಪತಿಯ ಪುತ್ರ ಕಾರ್ತಿಕ್ (8), ಬಾಬು ಹಾಗೂ ರೂಪ ದಂಪತಿಯ ಪುತ್ರಿ ತನುಶ್ರೀ (15) ಸಾವನ್ನಪ್ಪಿದ್ದಾರೆ. ಅಜ್ಜಿ ಹಾಗೂ ತಾಯಿಯೊಂದಿಗೆ ತೋಟಕ್ಕೆ ತೆರಳಿದ್ದ ಅವರು ಆಟವಾಡಲು ಹೋಗಿ ಪಕ್ಕದ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಮೃತಳಾದ ತನುಶ್ರೀ ಇತ್ತೀಚಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.86 ರಷ್ಟು ಅಂಕ ಗಳಿಸಿದ್ದಳು. ನೀರಿನ ಆಳ ಅರಿಯದ ಕಾರಣ ಇಬ್ಬರೂ ಜಲಸಮಾಧಿಯಾಗಿದ್ದಾರೆ. ವಿಷಯ ತಿಳಿದ ಬಂಗಾರಪೇಟೆ ತಹಸೀಲ್ದಾರ್ ಕೆ.ಎನ್.ಸುಜಾತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಕಲಾ ಕೆ.ಎಂ. ಸ್ಥಳಕ್ಕೆ ಭೇಟಿ ನೀಡಿ ಮಕ್ಕಳನ್ನು ಕಳೆದುಕೊಂಡು ಶೋಕತಪ್ತರಾದ ಪೋಷಕರಿಗೆ ಸಾಂತ್ವನ ಹೇಳಿದರು. ಗ್ರಾಮದಲ್ಲಿ ಮೌನ ಆವರಿಸಿದ್ದು, ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.




