ಬೈಕ್ ಸೈಲೆನ್ಸರ್ ವಿಚಾರಕ್ಕೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ…
ಚಿಕ್ಕಬಳ್ಳಾಪುರ ನಗರದ ಪ್ರತಿಷ್ಠಿತ ನಾಗಾರ್ಜುನ ಕಾಲೇಜು ಬಳಿ ಬೈಕ್ ಗಳಿಗೆ ವಿದ್ಯಾರ್ಥಿಗಳು ಕರ್ಕಶ ಶಬ್ಧ ಬರುವ ಸೈಲೆನ್ಸರ್ ಗಳನ್ನ ಅಳವಡಿಸಿಕೊಂಡು ಸಂಚರಿಸುತ್ತಿದ್ದರು. ಈ ವೇಳೆ ನಂದಿ ಗಿರಿಧಾಮ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎ ಎಸ್ ಐ ಗಂಗರಾಜು ಹಾಗೂ ಪೊಲೀಸ್ ಕಾನ್ಸ್ಟೇಬಲ್ ಕರ್ಕಶ ಶಬ್ಧ ಬರುವ ಸೈಲೆನ್ಸರ್ ಗಳನ್ನ ಬಳಸದಂತೆ ವಿಧ್ಯಾರ್ಥಿಗಳಿಗೆ ವಾರ್ನ್ ಮಾಡಿದ್ದಾರೆ. ಈ ವೇಳೆ ರೊಚ್ಚಿಗೆದ್ದ ನಾಗಾರ್ಜುನ ಕಾಲೇಜಿನ ವಿದ್ಯಾರ್ಥಿಗಳು ಗುಂಪುಕಟ್ಟಿಕೊಂಡು ಪೊಲೀಸರ ಮೇಲೆ ಮನಸ್ಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ. ಇನ್ನು ಈ ವಿಚಾರ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.





