bengaluruNational

ಬೆಂಗಳೂರಿಗೆ ನರೇಂದ್ರ ಮೋದಿ ಭೇಟಿ

Modi visit bangalore

ಪಿಎಂ ಭೇಟಿ ಹಿನ್ನೆಲೆ-ಸಂಚಾರ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಕನಕಪುರ ರಸ್ತೆಯಲ್ಲಿರುವ ‘ಆರ್ಟ್ ಆಫ್ ಲಿವಿಂಗ್’ ಅಂತಾರಾಷ್ಟ್ರೀಯ ಕೇಂದ್ರದ 45ನೇ ವಾರ್ಷಿಕೋತ್ಸವ ಹಾಗೂ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ.ಈ ಭೇಟಿಯ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಹಾಗೂ ಪಾರ್ಕಿಂಗ್ ನಿರ್ಬಂಧ ಹೇರಲಾಗಿದೆ.

ಪಾರ್ಕಿಂಗ್ ಎಲ್ಲಿ ನಿಷೇಧ? (ಬೆಳಗ್ಗೆ 5 ರಿಂದ ಮಧ್ಯಾಹ್ನ 3 ಗಂಟೆಯವರೆಗೆ)
ಹೆಚ್‌ಎಎಲ್ ಗೇಟ್ ನಂ.30: ಈ ಭಾಗದ ಮುಂಭಾಗದಲ್ಲಿ ವಾಹನ ನಿಲುಗಡೆ ಸಂಪೂರ್ಣ ನಿಷೇಧಿಸಲಾಗಿದೆ.

ಹೆಚ್‌ಎಎಲ್ ವಿಮಾನ ನಿಲ್ದಾಣ ಎಕ್ಸಿಟ್ ರಸ್ತೆ: ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಡಿಜಿಸಿಎ ಕಚೇರಿವರೆಗೆ ರಸ್ತೆಯ ಎರಡೂ ಬದಿಯಲ್ಲಿ ಪಾರ್ಕಿಂಗ್ ಇರುವುದಿಲ್ಲ.

ಅಂಬ್ರೆಲಾ ಜಂಕ್ಷನ್: ಇಲ್ಲಿಂದ ಹೆಚ್‌ಎಎಲ್ ಗೇಟ್ ನಂ.30 ರವರೆಗೆ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ.

ಹಳೇ ವಿಮಾನ ನಿಲ್ದಾಣ ರಸ್ತೆ: ಎಸ್.ಡಿ ರಸ್ತೆ ಜಂಕ್ಷನ್‌ನಿಂದ ಟ್ರಿನಿಟಿ ಜಂಕ್ಷನ್‌ವರೆಗೆ ಸಂಚಾರ ದಟ್ಟಣೆ ತಪ್ಪಿಸಲು ಪಾರ್ಕಿಂಗ್ ನಿಷೇಧಿಸಲಾಗಿದೆ.

ಸೂಚನೆ: ಗಣ್ಯ ವ್ಯಕ್ತಿಗಳು ಮತ್ತು ಅಧಿಕಾರಿಗಳಿಗೆ ಎಸ್.ಡಿ ರಸ್ತೆ ಜಂಕ್ಷನ್‌ನಲ್ಲಿರುವ ಹೆಚ್‌ಎಎಲ್ ಡಿಪಾರ್ಟ್‌ಮೆಂಟ್ ಪಾರ್ಕಿಂಗ್ ಮತ್ತು ಸುರಂಜನ್‌ ದಾಸ್ ರಸ್ತೆಯ ಹೆಚ್‌ಎಎಲ್ ಬಸ್ ಯಾರ್ಡ್‌ನಲ್ಲಿ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿದೆ.

ನೈಸ್ ರಸ್ತೆ ಹಾಗೂ ಪರ್ಯಾಯ ಮಾರ್ಗಗಳ ಮಾಹಿತಿ
ಪ್ರಧಾನಿ ಸಂಚರಿಸುವ ಮಾರ್ಗಗಳಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಸಾರ್ವಜನಿಕರು ಈ ಕೆಳಗಿನ ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚಿಸಲಾಗಿದೆ:

ತುಮಕೂರು ರಸ್ತೆಯಿಂದ ಕನಕಪುರ ರಸ್ತೆಗೆ: ಸಿಎಂಟಿಐ ಜಂಕ್ಷನ್ ಬಳಿ ತಿರುವು ಪಡೆದು ರಾಜ್ ಕುಮಾರ್ ಪುಣ್ಯಭೂಮಿ ರಸ್ತೆ ಮೂಲಕ ಸಂಚರಿಸಿ.

ಮಾಗಡಿ ರಸ್ತೆಯಿಂದ ಕನಕಪುರ ರಸ್ತೆಗೆ: ಸುಮ್ಮನಹಳ್ಳಿ ಜಂಕ್ಷನ್ ಬಳಿ ಬಲ ಅಥವಾ ಎಡ ತಿರುವು ಪಡೆದು ಸಂಚರಿಸುವುದು ಸೂಕ್ತ.

ಮೈಸೂರು ರಸ್ತೆಯಿಂದ ಕನಕಪುರ ರಸ್ತೆಗೆ: ನಾಯಂಡಹಳ್ಳಿ ಜಂಕ್ಷನ್ ಬಳಿ ತಿರುವು ಪಡೆದು ಹೊರ ವರ್ತುಲ ರಸ್ತೆ (Outer Ring Road) ಬಳಸುವುದು.

ಬೆಂಗಳೂರಿನಿಂದ ಕನಕಪುರಕ್ಕೆ ಹೋಗುವವರಿಗೆ ವಿಶೇಷ ಮಾರ್ಗಗಳು:

ಮಾರ್ಗ 01: ಕೋಣನಕುಂಟೆ ಕ್ರಾಸ್ -> ವಸಂತಪುರ -> ಕೆಂಗೇರಿ -> ಮೈಸೂರು ರಸ್ತೆ -> ಅಗರ -> ಬಂಜಾರಪಾಳ್ಯ -> ಕಗ್ಗಲಿಪುರ.

ಮಾರ್ಗ 02: ಎ2ಬಿ ಜಂಕ್ಷನ್ -> ನಾರಾಯಣ ನಗರ ಜೋಡಿ ರಸ್ತೆ -> ಅಂಜನಾಪುರ 80 ಅಡಿ ರಸ್ತೆ -> ಬನ್ನೇರುಘಟ್ಟ ಮುಖ್ಯರಸ್ತೆ ಮೂಲಕ ಕಗ್ಗಲಿಪುರ ತಲುಪಬಹುದು.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

#NarendraModi #BengaluruTraffic #ArtOfLiving #SriSriRavishankar #TrafficAdvisory #KanakapuraRoad #FreedomTV #BengaluruNews #PMModiInBengaluru

Comments (0)

Your email address will not be published. Required fields are marked *

Back to top button