Election commission of India

ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR; ಚುನಾವಣಾ ಆಯೋಗ ಆದೇಶ!

SIR process by Election commission of India

ನವದೆಹಲಿ: ದೇಶದಲ್ಲಿ ನಡೆಯುವ ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಭಾರತೀಯ ಚುನಾವಣಾ ಆಯೋಗ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ದೇಶದ 16 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ SIR ಹಂತ- III ನಡೆಸಲು ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಚುನಾವಣಾ ಆಯೋಗದ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಈ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಂತ- III ರ ಉದ್ದೇಶ ನಕಲಿ ಮತದಾರರನ್ನು ಪತ್ತೆ ಮಾಡಿ ಶಾಶ್ವತವಾಗಿ ಮತದಾರರ ಪಟ್ಟಿಯಿಂದ ಅನರ್ಹರನ್ನು ಕೈಬಿಡುವುದೇ ಆಗಿದೆ.

SIR ಪ್ರಕ್ರಿಯೆ ಕರ್ನಾಟಕ, ಒಡಿಶಾ, ಮಿಜೋರಾಂ, ಮಣಿಪುರ, ಸಿಕ್ಕೀಂ, ಉತ್ತರಾಖಂಡ, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಹರಿಯಾಣ, ಚಂಡೀಗಢ, ತೆಲಂಗಾಣ, ಪಂಜಾಬ್, ಮೇಘಾಲಯ, ಮಹಾರಾಷ್ಟ್ರ, ಜಾರ್ಖಂಡ್, ದೆಹಲಿ, ನಾಗಾಲ್ಯಾಂಡ್ ಮತ್ತು ತ್ರಿಪುರದಲ್ಲಿ ನಡೆಯಲಿದೆ.

SIR ಪ್ರಕ್ರಿಯೆಯ ವೇಳಾಪಟ್ಟಿ
ಜೂನ್ 20 – ಜೂನ್ 29; ಅಧಿಕಾರಿಗಳಿಗೆ ಸೂಕ್ತ ತರಬೇತಿ ಮತ್ತು ಅರ್ಜಿಗಳ ಮುದ್ರಣ ಕಾರ್ಯ
ಜೂನ್ 30 – ಜುಲೈ 29; ಬೂತ್ ಮಟ್ಟದ ಅಧಿಕಾರಿಗಳು (BLOs) ಕಡ್ಡಾಯವಾಗಿ ಮನೆ ಮನೆಗೆ ಹೋಗಿ ಪರಿಶೀಲನೆ ನಡೆಸುವ ಅವಧಿ.
ಆಗಸ್ಟ್ 5-ಮತದಾರರ ಕರಡು ಪಟ್ಟಿ ಪ್ರಕಟಣೆ
ಆಗಸ್ಟ್ 5 – ಸೆಪ್ಟೆಂಬರ್ 4 ಸಾರ್ವಜನಿಕರು ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಹೊಸದಾಗಿ ಹೆಸರು ಸೇರ್ಪಡೆಗೆ ಇರುವ ಕಾಲಾವಕಾಶ.
ಅಕ್ಟೋಬರ್ 7-ಕರ್ನಾಟಕದ ಅಂತಿಮ ಪರಿಷ್ಕೃತ ಮತದಾರರ ಪಟ್ಟಿ ಅಧಿಕೃತವಾಗಿ ಬಿಡುಗಡೆ

ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವೇಳಾಪಟ್ಟಿಯನ್ನು ಚುನಾವಣಾ ಸಮಿತಿಯು ನಂತರ ಪ್ರಕಟಿಸಲಿದೆ. ಎಲ್ಲಾ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಂತ ಹಂತವಾಗಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲಾಗುವುದು. ನಿಟ್ಟಿನಲ್ಲಿ ಆಯಾ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಆಯೋಗ ತಿಳಿಸಿದೆ.

#ElectionCommission #VoterListRevision #KarnatakaNews #Election2026 #VoterID #GyaneshKumar #FreedomTV #Democracy #NewVoters #SIR2026 #NationalCensus

Comments (0)

Your email address will not be published. Required fields are marked *

Back to top button